ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಂಗಾಳಕೊಲ್ಲಿಯ #Bay of Bengal ತಿರುಗುವಿಕೆ ಮತ್ತು ಅರಬ್ಬಿ ಸಮುದ್ರದ ನೈರುತ್ಯ ಕಡೆಯಿಂದ ಗಾಳಿ ಬೀಸುತ್ತಿರುವ ಹಿನ್ನೆಲೆ ಇಂದು ಮತ್ತು ನಾಳೆ ರಾಜ್ಯದ ಹಲವಡೆ ಮಳೆಯಾಗುವ ಸಾಧ್ಯತೆಯಿದೆ #Rain ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಜೊತೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡದಲ್ಲಿ ಸ್ವಲ್ಪ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಂಭವವಿದೆ ಎನ್ನಲಾಗಿದೆ.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಮೋಡದ ವಾತಾವರಣದೊಂದಿಗೆ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
Also read: ರಾಜ್ಯ ಕಾಂಗ್ರೆಸ್ ಸರ್ಕಾರ ‘ಶುಲ್ಕ ವಸೂಲಿಗಾರ ಸರ್ಕಾರ’ | ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ
ಉತ್ತರ ಒಳನಾಡಿನ ಹಾವೇರಿ, ಗದಗ, ಧಾರವಾಡ, ಬೆಳಗಾವಿ, ದಾವಣಗೆರೆ ಬಳ್ಳಾರಿ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post