ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಮುಖ್ಯಮಂತ್ರಿಯಾಗಿ ಎರಡು ವರ್ಷ ಪೂರೈಸಿದ ಬೆನ್ನಲ್ಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಬಿಜೆಪಿ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯವನ್ನುದ್ದೇಶಿಸಿ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ತೀರ್ಮಾನಿಸಿದ್ದೇನೆ ಎಂದು ಭಾವುಕರಾಗಿ ಕಣ್ಣೀರಿಡುತ್ತಲೇ ಘೋಷಿಸಿದರು.
ದುಃಖದಿಂದ ಅಲ್ಲ, ಸಂತೋಷದಿಂದಲೇ ನಿರ್ಗಮಿಸುತ್ತಿದ್ದೇನೆ. 75 ವರ್ಷ ಮೀರಿದ ಯಾರಿಗೂ ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಲು ಅವಕಾಶ ನೀಡಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು, ನನ್ನ ಬಗ್ಗೆ ನಂಬಿಕೆ ಇಟ್ಟು ಎರಡು ವರ್ಷ ಮುಖ್ಯಮಂತ್ರಿ ಹುದ್ದೆಯಲ್ಲಿ ಕೂರಿಸಿದ್ದರು. ಇದಕ್ಕಾಗಿ ಪ್ರಧಾನಿ ಅವರನ್ನು ಹಾಗೂ ಎರಡು ವರ್ಷ ಸಹಕರಿಸಿದ ಸಚಿವ ಸಂಪುಟದ ಎಲ್ಲಾ ಸದಸ್ಯರಿಗೂ ಹಾಗೂ ಅಧಿಕಾರಿಗಳಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು.
ಇಡಿಯ ಭಾಷಣದಲ್ಲಿ ಯಾರನ್ನೂ ಧೂಷಿಸಿದ ಯಡಿಯೂರಪ್ಪ ಭಾಷಣದುದ್ದಕ್ಕೂ ಭಾವುಕರಾಗಿಯೇ ಕಣ್ಣೀರಿಟ್ಟರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post