ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಭಾನುವಾರ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ C M Ibrahim ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ಅವರು ತಿಳಿಸಿದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಪ್ಪೇಸ್ವಾಮಿ ಅವರು ಮಾಹಿತಿ ನೀಡಿದರು.
Also read: ಶಿವಮೊಗ್ಗ-ಭದ್ರಾವತಿಯಲ್ಲಿ ಎದೆ ನಡುಗಿಸಿದ ಗುಡುಗು ಸಿಡಿಲು: ತಂಪನೆರೆದ ಮಳೆರಾಯ


ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















