ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದಲ್ಲಿ ನಿಫಾ ವೈರಸ್ ಸೋಂಕು ಹರಡದಂತೆ ಮುಂಜಾಗೃತ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ರಾಜ್ಯ ಕೇರಳದಲ್ಲಿ ಕಾಣಿಸಿಕೊಂಡಿರುವ ನಿಫಾ ವೈರಸ್ ರಾಜ್ಯದಲ್ಲಿ ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಕೇರಳ ಗಡಿಭಾಗ ಸೇರಿದಂತೆ ರಾಜ್ಯದ ಎಲ್ಲಾ ಗಡಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲು ಈಗಾಗಲೇ ತಿಳಿಸಲಾಗಿದೆ ಎಂದರು.
ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡ ಹಿನ್ನಲೆಯಲ್ಲಿ ಒಂದು ಮಗು ಮೃತಪಟ್ಟಿರುವ ಬಗ್ಗೆ ವರದಿಗಳಾಗಿವೆ. ಈ ನಿಟ್ಟಿನಲ್ಲಿ ನಮ್ಮ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ನಿಫಾ ವೈರಸ್ ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಈಗಾಗಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಗಣೇಶ ಹಬ್ಬ ಇರುವ ಕಾರಣ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು. ನಿಫಾ ವೈರಸ್ ಬಗ್ಗೆ ಎಚ್ಚರಿಕೆಯಿಂದಿರಲು ಸಾರ್ವಜನಿಕರು ಯಾವೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಕುರಿತಾಗಿ ತಜ್ಞರ ಜತೆ ಚರ್ಚೆ ನಡೆಸಲಾಗಿದೆ. ನಮಗೆ ತಜ್ಞರು ನೀಡುವ ವರದಿಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post