ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ತೀವ್ರ ಸ್ವರೂಪ ಪಡೆದುಕೊಂಡಿದ್ದರಿಂದ ಲಾಕ್‌ಡೌನ್ ಮಾಡುವುದು ಅನಿವಾರ್ಯವಾಗಿತ್ತು. ಇದರಿಂದಾಗಿ ಹಲವು ಅಸಂಘಟಿತ ವಲಯಗಳ ಕಾರ್ಮಿಕರು, ರೈತರು, ದಿನಗೂಲಿ ನೌಕರರು, ಬಡವರು ಹಾಗೂ ನಿರ್ಗತಿಕರಿಗೆ ತೀವ್ರ ಸಂಕಷ್ಟವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ 1,250 ಕೋಟಿ ರೂ.ಗೂ ಹೆಚ್ಚಿನ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿ ಮಾತನಾಡಿದ ಅವರು, ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಇಂದು ಸಭೆ ನಡೆಸಿ ತೆಗೆದುಕೊಂಡ ತೀರ್ಮಾನಗಳು, ಪರಿಹಾರಗಳನ್ನು ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರಕಟಿಸಿದರು.
ಯಾರಿಗೆ ನೆರವು ಸಿಗಲಿದೆ:
ಆಟೋ, ಕ್ಯಾಬ್ ಚಾಲಕರು ಮತ್ತು ನೋಂದಾಯಿತ ನಿರ್ಮಾಣ ಕಾರ್ಮಿಕರಿಗೆ 3000ರೂ. ಹೂ ಬೆಳೆಗಾರರು ಮತ್ತು ತೋಟಗಾರಿಕೆ ಕೃಷಿಕರಿಗೆ 10,000 ರೂ. ಬೀದಿ ಬದಿ ವ್ಯಾಪಾರಿಗಳಿಗೆ 2000 ರೂ. ಆರ್ಥಿಕ ನೆರವು ಹಾಗೂ ಅಸಂಘಟಿತ ವಲಯದ ಕಾರ್ಮಿಕರಾದ ಸ್ವಚ್ಛತಾ ಕಾರ್ಯ ಮಾಡುವವರು, ಕುಂಬಾರರು, ಕ್ಷೌರಿಕರು, ಚರ್ಮದ ಕೆಲಸಗಾರರು, ಮೆಕ್ಯಾನಿಕ್ಸ್ ಇತ್ಯಾದಿಯವರಿಗೆ ನೆರವು ನೀಡಲಾಗಿದೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post