ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ ಅದೇ ದ್ವಾರದ ಮೂಲಕ ಕಚೇರಿಗೆ ಪ್ರವೇಶಿಸಿದರು.
ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ CM Siddaramaiah ಅವರು, ದಕ್ಷಿಣ ದ್ವಾರ ಬಂದ್ ಆಗಿರುವುದನ್ನು ಗಮನಿಸಿದರು. ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂದ ಬಳಿಕ ಮುಖ್ಯಮಂತ್ರಿಗಳು ಆ ದ್ವಾರದಲ್ಲೇ ನಿಂತರು. ಪಶ್ಚಿಮ ದ್ವಾರದಿಂದ ಸಿಬ್ಬಂದಿ ಒಳಗೆ ಹೋಗಿ ದಕ್ಷಿಣದ ದ್ವಾರವನ್ನು ತೆರೆದ ಬಳಿಕ ಅದೇ ದ್ವಾರದ ಮೂಲಕವೇ ತಮ್ಮ ಕಚೇರಿ ಪ್ರವೇಶಿಸಿದರು.
ಆರೋಗ್ಯಕರ ಮನಸ್ಸು, ಸ್ವಚ್ಚ ಹೃದಯ, ಜನಪರ ಕಾಳಜಿ, ಒಳ್ಳೆ ಗಾಳಿ ಬೆಳಕು ಬರುವಂತಿದ್ದರೆ ಅದೇ ಉತ್ತಮ ವಾಸ್ತು ಎಂದು ಅಧಿಕಾರಿಗಳ ಜತೆ ನಮ್ಮ ನಿಲುವನ್ನು ಹಂಚಿಕೊಂಡರು.
Also read: ಆಯುರ್ವೇದ ಆಸ್ಪತ್ರೆಯಲ್ಲಿ ಔಷಧ ಸಸ್ಯಗಳ ಭಂಡಾರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post