ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಾಗರ ತಾಲ್ಲೂಕಿನ ಸೇತುವೆ #Sigandhuru Bridge ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡಲು ಕೇಂದ್ರ ಸಚಿವರು ಸಮ್ಮತಿಸಿದ್ದರೂ, ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ #CM Siddaramaiah ಬೇಸರ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ನನಗೂ ಭಾಗವಹಿಸುವ ಇಚ್ಛೆಯಿಂದ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ #NItin Gadkari ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಆದರೂ ಶಿಷ್ಠಾಚಾರದ ಮೀರಿ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದರು.
ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರನ್ನಾಗಲೀ, ಸ್ಥಳೀಯ ಶಾಸಕರನ್ನಾಗಲೀ ಆಮಂತ್ರಣ ನೀಡಲಾಗಿಲ್ಲ. ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಂಬಂಧಪಟ್ಟ ಸಾಗರ ತಾಲ್ಲೂಕಿನ ಮುಖಂಡರಿಗೆ ತಿಳಿಸಲಾಗಿದ್ದು, ಕಾರ್ಯಕ್ರಮದಲ್ಲಿ ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post