ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ವಿರುದ್ಧ ಶೇ.40 ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ #CM Siddaramaiah ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ #DCM DK Shivakumar ಅವರುಗಳು ಇಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಜಾಮೀನು ಪಡೆದಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಪಡೆಯುವ ಆರೋಪವನ್ನು ಕಾಂಗ್ರೆಸ್ ಮಾಡಿತ್ತು. ಈ ಕುರಿತಂತೆ ಜಾಹೀರಾತು ಪ್ರಕಟಿಸಿ, ಪೋಸ್ಟರ್’ಗಳನ್ನು ಅಂಟಿಸಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ಹೂಡಿತ್ತು. ಕಾಂಗ್ರೆಸ್ ವಿರುದ್ಧ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೇಶವ್ ಪ್ರಸಾದ್ ದೂರು ದಾಖಲಿಸಿದ್ದರು.

ಈ ಹಿನ್ನೆಲೆ ಇಂದು ಸಿಎಂ ಮತ್ತು ಡಿಸಿಎಂ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ನ್ಯಾಯಾಲಯಕ್ಕೆ ಆಗಮಿಸಿದ ಸಿಎಂ ಹಾಗೂ ಡಿಸಿಎಂ ಅವರಿಗೆ ಸರ್ಕಾರಿ ಅಭಿಯೋಜಕರ ಕೊಠಡಿಯಲ್ಲಿ ಕುಳಿತುಕೊಳ್ಳಲು ಸೂಚಿಸಲಾಯಿತು. ಆದರೆ, ಬೇಡ ಇ¯್ಲೆ ಕೂರುತ್ತೇವೆ ಎಂದು ಇಬ್ಬರೂ ಹೇಳಿದರು. ಸಾಮಾನ್ಯರಂತೆ ನ್ಯಾಯಾಲಯದ ಹೊರಗಡೆ ಸಿಎಂ ಮತ್ತು ಡಿಸಿಎಂ ಕುಳಿತರು.
ನಾಯಕರ ಪರವಾಗಿ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಹಮ್ಮದ್ ಹಾಜರಿದ್ದರು. ಬಿಜೆಪಿ ಪರವಾಗಿ ವಕೀಲ ವಿನೋದ್ ಕುಮಾರ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post