ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಇದು ಎರಡನೆಯ ಬಾರಿ ಕೊರೋನಾ ಸೋಂಕು ದೃಢಪಟ್ಟಿದ್ದರಿಂದ ಏಪ್ರಿಲ್ 16ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಸೂಕ್ತ ಚಿಕಿತ್ಸೆಯ ಬಳಿಕ ಗುಣಮುಖರಾಗಿರುವ ಯಡಿಯೂರಪ್ಪ ಅವರಿಗೆ ಕೊರೋನಾ ಪರೀಕ್ಷಾ ವರದಿ ನೆಗೆಟಿವ್ ಬಂದಿರುವ ಪರಿಣಾಮ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಗೆ ಬರಬೇಡಿ. ಸೋಂಕು ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕಠಿಣ ಕ್ರಮಗಳನ್ನು ಜಾರಿ ಮಾಡಿದೆ. ಜನರು ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ಸೋಂಕು ಹರಡವುದನ್ನು ತಡೆಗಟ್ಟಲು ಸಹಕರಿಸಬೇಕು. ಹಾಗೂ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿ ಎಂದು ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post