ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜು. 24ರಂದು ನವದೆಹಲಿಗೆ ತೆರಳಿತ್ತಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಮಲೋಚನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ್ CM Basavaraja Bommai ತಿಳಿಸಿದರು.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಪ್ರಧಾನಕಾರ್ಶಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಇಲಾಖೆಗಳ ನಿಯೋಗದೊಂದಿಗೆ ಜುಲೈ 24ರಂದು ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದೇನೆ ಎಂದರು.
ರಾಷ್ಟ್ರದ ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಕಾರ್ಯಕ್ರಮ, ವಿವಿಧ ಇಲಾಖೆಗಳು ಮತ್ತು ಕಸ್ತೂರಿ ರಂಗನ್ ಯೋಜನೆ ವಿಚಾರವಾಗಿ ನಿಯೋಗವನ್ನು ಬೆಂಗಳೂರಿನಿಂದ ದೆಹಲಿಗೆ ಕರೆದೊಯ್ಯಿರುವುದಾಗಿ ಸಿಎಂ ಬೊಮ್ಮಾಯಿ ಅವರು ತಿಳಿಸಿದರು.
Also read: ಗುಡ್ ನ್ಯೂಸ್! ಜು.24ರಿಂದ ಮತ್ತೆ ಸಂಚರಿಸಲಿದೆ ತಾಳಗುಪ್ಪ- ಮೈಸೂರು ಪ್ಯಾಸೆಂಜರ್ ರೈಲು
ಜುಲೈ 25 ಮತ್ತು 26 ರಂದು ದೆಹಲಿಯಲ್ಲಿರುತ್ತೇನೆ. ಆ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಮೇಲಿನವರು ಪ್ರಸ್ತಾಪ ಮಾಡಿದರೆ, ನಾನು ಮಾತುಕತೆ ನಡೆಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post