ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಾನು ಕದ್ದ ಮಾಲನ್ನು ಹಿಂದಿರುಗಿಸಿದ ಕೂಡಲೆ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ ಎಂದು ಸಿಎಂ ಹಾಗೂ ಅವರ ಪತ್ನಿ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ್ #R Ashok ಟಾಂಗ್ ನೀಡಿದ್ದಾರೆ.
ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ @siddaramaiah ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ.… pic.twitter.com/eIkCuVpMgX
— R. Ashoka (@RAshokaBJP) September 30, 2024
ತಾವು ಪಡೆದ 14 ಸೈಟುಗಳನ್ನು ಮೂಡಾಗೆ #MUDA ಹಿಂದಿರುಗಿಸಲು ಸಿಎಂ ಪತ್ನಿ ಪಾರ್ವತಿ #CM Siddaramaiah Wife Parvathi ಅವರು ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ಅಶೋಕ್ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ #CM Siddaramaiah ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನು ಹಿಂತಿರುಗಿಸುವ ನಿರ್ಧಾರ ಮಾಡಿದ್ದಾರೆ. ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ ಎಂದಿದ್ದಾರೆ.
Also read: 14 ಸೈಟ್ ಹಿಂದಿರುಗಿಸುವ ತಮ್ಮ ಪತ್ನಿ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ಏನು?
ಆದರೆ ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ? ಎಂದಿದ್ದಾರೆ.
‘ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ ಎಂದಿದ್ದಾರೆ.
ಆದರೆ ‘ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ’ ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ನವರು ತಮ್ಮ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಪಡೆದಿದ್ದ ಸೈಟುಗಳನ್ನು ವಾಪಸ್ಸು ನೀಡುವ `ದೊಡ್ದ’ ಮನಸ್ಸು ಮಾಡಿರುವುದು, ಸಂವಿಧಾನವನ್ನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ. ರಾಜ್ಯಪಾಲರ ನಿರ್ಧಾರವನ್ನ ಎತ್ತಿ ಹಿಡಿದ ನ್ಯಾಯಾಂಗಕ್ಕೆ ಸಿಕ್ಕ ದೊಡ್ಡ ಜಯ. ಜಗ್ಗಲ್ಲ, ಬಗ್ಗಲ್ಲ ಎಂದು ಅಧಿಕಾರದ ಮದದಿಂದ ಮೆರೆಯುತ್ತಿದ್ದವರ ವಿರುದ್ಧ ಬಾಬಾಸಾಹೇಬ್ ಅಂಬೇಡ್ಕರರ ಸಂವಿಧಾನಕ್ಕೆ ಸಿಕ್ಕ ದೊಡ್ಡ ಜಯ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post