ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ತಡೆ ಕಾರ್ಯಾಚರಣೆಯಲ್ಲಿ ವಿವಿಧ ತನಿಖಾ ಸಂಸ್ಥೆಗಳು 4 ಕೋಟಿ ರೂ.ಗೂ ಅಧಿಕ ಹಣವನ್ನು ಜಪ್ತಿ ಮಾಡಿದ್ದಾರೆ.
ವಿವಿಧ ತನಿಖಾ ಸಂಸ್ಥೆಗಳು ನಡೆಸಿರುವ ಕಾರ್ಯಾಚರಣೆಯಲ್ಲಿ ನಗದು, ಮದ್ಯ, ಉಡುಗೊರೆ ವಸ್ತುಗಳು ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಚುನಾವಣಾ ಆಯೋಗ ಈವರೆಗೂ 27.38 ಕೋಟಿ ರೂ. ನಗದನ್ನು ವಶಕ್ಕೆ ಪಡೆದುಕೊಂಡಿದೆ.
ಇನ್ನು, ಅಬಕಾರಿ ಇಲಾಖೆಯು 1.88 ಕೋಟಿ ರೂ. ಮೌಲ್ಯದ 62826 ಲೀಟರ್ ಮದ್ಯ ವಶಪಡಿಸಿಕೊಂಡಿದೆ. ಧಾರವಾಡದಲ್ಲಿ 44.70 ಲಕ್ಷ ರೂ. ಮೌಲ್ಯದ 0.725 ಕೆಜಿ ಚಿನ್ನ ಮತ್ತು ಬೆಂಗಳೂರಿನ ಬ್ಯಾಟರಾಯನಪುರದಲ್ಲಿ 34.16 ಲಕ್ಷ ರೂ. ಮೌಲ್ಯದ ಉಚಿತ ಕೊಡುಗೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.
Also read: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಅಖಂಡ ಆಂಧ್ರದ ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post