ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೆ ಶೀತಲ ಸಮರ ಆರಂಭವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧವೇ ತಿರುಗಿ ಬಿದ್ದಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಇದೀಗ ವರಿಷ್ಠರಿಗೆ ಪತ್ರದ ಮೂಲಕ ದೂರು ನೀಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಸಿಎಂ ವಿನಾಕಾರಣ ಹಸ್ತಕ್ಷೇಪ, ಅನುದಾನ ಹಂಚಿಕೆಯಲ್ಲಿ ತಾರತಮ್ಯ ಸೇರಿದಂತೆ ಹಲವು ವಿಚಾರವಾಗಿ ಸಿಎಂ ಯಡಿಯೂರಪ್ಪ ವಿರುದ್ಧ ಸಚಿವ ಈಶ್ವರಪ್ಪ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದಾಖಲೆ ಸಮೇತ 2 ಪುಟಗಳ ದೂರು ನೀಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಇಲಾಖೆಗೆ ಬಿಡುಗಡೆ ಮಾಡಬೇಕಿದ್ದ ಹಣವನ್ನು ತಮ್ಮ ಗಮನಕ್ಕೂ ತರದೇ ಸಿಎಂ ಯಡಿಯೂರಪ್ಪ, ಶಾಸಕರುಗಳ ಕ್ಷೇತ್ರಗಳಿಗೆ ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ರಸ್ತೆ ನಿರ್ಮಾಣ ಹಾಗೂ ನಿರ್ವಹಣೆಗೆ 1200 ಕೋಟಿ ರೂಪಾಯಿ ಮೀಸಲಿಡಲಾಗಿತ್ತು. ಆದರೆ ಈ ಹಣವನ್ನು ಶಾಸಕರ ಕ್ಷೇತ್ರಗಳಿಗೆ ಬಿಡುಗಡೆ ಮಾಡಿದ್ದಾರೆ. ಅದರಲ್ಲೂ ಮುಖ್ಯವಾಗಿ ವಿಪಕ್ಷ ಶಾಸಕರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಅಲ್ಲದೇ ಸಧ್ಯದ ಆಡಳಿತ ವೈಖರಿಯನ್ನು ಬದಲಿಸುವಂತೆಯೂ ದೂರಿನಲ್ಲಿ ಮನವಿ ಮಾಡಿದ್ದಾರೆ. ಸಿಎಂ ವಿರುದ್ಧ ಈಶ್ವರಪ್ಪ ರಾಜ್ಯಪಾಲರಿಗೂ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post