ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಈರುಳ್ಳಿ ಹಾಗೂ ಟೊಮ್ಯಾಟೋ ಬೆಲೆ ಪಾತಾಳಕ್ಕೆ ಕುಸಿದಿದ್ದು, ರೈತರು ಕಂಗಾಲಾಗಿದ್ದು, ರಾಜ್ಯ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಯಶವಂತಪುರ ಎಪಿಎಂಸಿ ಯಾರ್ಡ್ ಪ್ರಕಾರ ಇತ್ತೀಚಿನ ದಿನಗಳಲ್ಲಿ ಈರುಳ್ಳಿ ಬೆಲೆ ಕೆಜಿಗೆ 2ರಿಂದ 10 ರೂ.ಗೆ ಕುಸಿದಿದ್ದು, ಗುಣಮಟ್ಟಕ್ಕೆ ಅನುಗುಣವಾಗಿ ಗರಿಷ್ಠ 12ರಿಂದ 18 ರೂ ಆಗಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾತನಾಡಿರುವ ಈರುಳ್ಳಿ ಬೆಳೆಗಾರರೊಬ್ಬರು, ಉತ್ತಮ ಬೆಲೆ ಸಿಗಬಹುದೆಂಬ ನಿರೀಕ್ಷೆಯಿಂದ ದೂರದ ಪ್ರದೇಶಗಳಿಂದ ತಮ್ಮ ಉತ್ಪನ್ನಗಳನ್ನು ತರುತ್ತಿದ್ದ ಜನರಿಗೆ ನಿರಾಸೆಯಾಗಿದೆ ಎಂದಿದ್ದಾರೆ.
ಉತ್ತರ ಕರ್ನಾಟಕದ ಗದಗ ಜಿ¯್ಲೆಯ ತಿಮ್ಮಾಪುರದ ರೈತ ಪವಾಡೆಪ್ಪ ಹಳ್ಳಿಕೇರಿ ಉತ್ತಮ ಈರುಳ್ಳಿ ಫಸಲು ಪಡೆದಿದ್ದು, ಗದಗ ಎಪಿಎಂಸಿ ಯಾರ್ಡ್’ನಲ್ಲಿ ಮಾರಾಟ ಮಾಡುವ ಬದಲು ಬೆಂಗಳೂರಿನಲ್ಲಿ ಮಾರಾಟ ಮಾಡಲು ನಿರ್ಧರಿಸಿದ್ದಾರೆ.
ಇದರೊಂದಿಗೆ ಟೊಮ್ಯಾಟೋ ಬೆಲೆಯೂ ಸಹ ಕುಸಿದಿದ್ದು, ಇದನ್ನುಬೆಳೆದ ರೈತ ಬೀದಿಗೆ ಬೀಳುವ ಆತಂಕದಲ್ಲಿದ್ದಾನೆ. ಈ ಹಿನ್ನೆಲೆಯಲ್ಲಿ ಈ ಎರಡೂ ಉತ್ಪನ್ನಗಳಿಗೆ ರಾಜ್ಯ ಸರ್ಕಾರ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ರೈತರು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post