ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೊರೋನಾ Corona ನಂತರ ಇಂಟರ್ ನೆಟ್ ಬಳಕೆ ಬಹಳ ಹೆಚ್ಚಾಗಿದ್ದು, ಈಗ ಹೆಚ್ಚಾಗಿ ಎಲ್ಲಾ ಆನ್’ಲೈನ್ ನಲ್ಲೇ ನಡೆಯುತ್ತಿದೆ. ಆದರೆ ಕೊರೋನಾ ಪೂರ್ವದಲ್ಲೇ ಹಾಲಿವುಡ್ ನಿರ್ದೇಶಕ ರಾಂಡಿ ಕೆಂಟ್ ಸ್ಕ್ವೇಪ್ ಮೂಲಕ ನಿರ್ದೇಶಿಸಿದ ಚಿತ್ರ ರೋಡ್ ಕಿಂಗ್ Road King ಸ್ಕ್ವೇಪ್ ಮೂಲಕ ನಿರ್ದೇಶನ ಮಾಡಿರುವ ಮೊದಲ ಚಿತ್ರ ಇದಾಗಿದ್ದು, ಇದೇ 23ರಂದು ಇದು ತೆರೆಗೆ ಬರಲಿದೆ.
ಹಾಲಿವುಡ್ ನ ರಾಂಡಿ ಕೆಂಟ್ ಅವರ ಬಳಿ ಈ ಚಿತ್ರವನ್ನು ನಿರ್ದೇಶನ ಮಾಡಿಸಬೇಕೆಂದುಕೊAಡು ಎಲ್ಲಾ ತಯಾರಿ ಮಾಡಿಕೊಳ್ಳಲಾಗಿತ್ತು. ಆದರೆ ಕೊನೆ ಗಳಿಗೆಯಲ್ಲಿ ವೀಸಾ ಸಮಸ್ಯೆಯಿಂದ ರಾಂಡಿ ಅವರು ಭಾರತಕ್ಕೆ ಬರಲಾಗಲಿಲ್ಲ. ಆಗ ಏನು ಮಾಡಬೇಕೆಂದು ಹೊಳೆಯಲಿಲ್ಲ. ಹೀಗೆ ಯೋಚಿಸುತ್ತಿದ್ದಾಗ ಸ್ಕ್ವೇಪ್ ಮೂಲಕ ನಿರ್ದೇಶನ ಮಾಡಿಸಿದರೆ ಹೇಗೆ? ಎಂದು ನನ್ನ ಮಿತ್ರ ಭುವನ್ ಬಳಿ ಹೇಳಿದೆ. ಆನಂತರ ಸ್ಕ್ವೇಪ್ ಮೂಲಕವೇ ರಾಂಡಿ ಅವರು ಅಮೇರಿಕಾದಿಂದ ಈ ಚಿತ್ರ ನಿರ್ದೇಶನ ಮಾಡಿದರು. ಹಲವು ಕಾರಣಾಂತರದಿಂದ ಚಿತ್ರ ತೆರೆಗೆ ಬರುವುದು ತಡವಾಯಿತು. ಜೂನ್ 23 ಚಿತ್ರ ಬಿಡುಗಡೆಯಾಗಲಿದೆ. ನಾನೇ ಚಿತ್ರಕ್ಕೆ ಕಥೆ ಬರೆದಿದ್ದೇನೆ. ನಾಯಕನಾಗಿಯೂ ನಟಿಸಿದ್ದೇನೆ ಎಂದರು ಮತೀನ್ ಹುಸೇನ್.

ನಿರ್ಮಾಪಕ ದಿಲೀಪ್ ಕುಮಾರ್ ಮಾತನಾಡಿ, ರೋಡ್ ಕಿಂಗ್ ಚಿತ್ರದ ಕಥೆ ಚೆನ್ನಾಗಿದೆ. ಸದ್ಯದಲ್ಲೇ ರೋಡ್ ಕಿಂಗ್ 2 ಚಿತ್ರವನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ.
Also read: ಮತಾಂತರ ನಿಷೇಧ ಕಾನೂನು ಹಿಂಪಡೆದರೆ ಉಗ್ರ ಹೋರಾಟದ ಎಚ್ಚರಿಕೆ
ರಾಂಡಿ ಕೆಂಟ್ ಅವರು ನಿರ್ದೇಶನ ಮಾಡಿದ ಪರಿಯನ್ನು ವಿಸ್ತಾರವಾಗಿ ಸಂಕಲನಕಾರ ಕ್ರೇಜಿ ಮೈಂಡ್ಸ್ ವಿವರಿಸಿದರು. ಚಿತ್ರದಲ್ಲಿ ನಟಿಸಿರುವ ಲೀಲಾ ಮೋಹನ್, ಹರೀಶ್ ಕುಮಾರ್ ಹಾಗೂ ಭುವನ್ ರಾಜ್ ಚಿತ್ರದ ಕುರಿತು ಮಾತನಾಡಿದರು. ಚಿತ್ರದ ಹಾಡೊಂದನ್ನು ಹಾಡಿರುವ ಖ್ಯಾತ ಗಾಯಕ ಚಂದನ್ ಶೆಟ್ಟಿ ಸಹ ಚಿತ್ರತಂಡಕ್ಕೆ ಶುಭ ಕೋರಿದರು.
ರನ್ ಆಂಟೋನಿ ಖ್ಯಾತಿಯ ರುಕ್ಷಾರ್ ಈ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ.











Discussion about this post