ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿಯಾಗಿಸಲು ಸ್ವಲ್ಪ ಸಮಯಾವಕಾಶ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.
ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಅವರ ನೇತೃತ್ವದ ನಿಯೋಗವು ಇಂದು ತಮ್ಮನ್ನು ಭೇಟಿ ಮಾಡಿ ಬಾಕಿ ಇರುವ ಬಿಲ್ಲುಗಳ ಪಾವತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ ಸಂದರ್ಭದಲ್ಲಿ ಅವರು, ರಾಜ್ಯದಲ್ಲಿ ಕಮಿಷನ್ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
Also read: ಹೊಸಮನೆ ಬಡಾವಣೆಯಲ್ಲಿ ವಿವಿಧ ಕಾಮಗಾರಿಗೆ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಚಾಲನೆ
ಬಜೆಟ್ ಮಂಡನೆಯಾಗಬೇಕಿದೆ. ಬಜೆಟ್ ಅಧಿವೇಶನದ ನಂತರ ಬಿಬಿಎಂಪಿ ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು ಪರಿಶೀಲಿಸಲಾಗುವುದು ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















