ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಗಳ ೩ನೇ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದ್ದು, ೪೩ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಶಿವಮೊಗ್ಗ ಕ್ಷೇತ್ರಕ್ಕೆ ಹೆಚ್.ಸಿ. ಯೋಗೀಶ್ ಹಾಗೂ ಶಿವಮೊಗ್ಗ ಗ್ರಾಮಾಂತರಕ್ಕೆ ಶ್ರೀನಿವಾಸ್ ಕರಿಯಣ್ಣ, ಶಿಕಾರಿಪುರಕ್ಕೆ ಗೋಣಿ ಮಾಲತೇಶ್ ಹೆಸರನ್ನು ಘೋಷಿಸಲಾಗಿದೆ.
ಇನ್ನು ನಿನ್ನೆಯಷ್ಟೆ ಬಿಜೆಪಿ ತೊರೆದು ಕಾಂಗ್ರೆಸ್ ಬಾವುಟ ಹಿಡಿದಿದ್ದ ಲಕ್ಷ್ಮಣ ಸವದಿಗೆ ಅಥಣಿ ಕ್ಷೇತ್ರಕ್ಕೆ ಟಿಕೇಟ್ ನೀಡಲಾಗಿದೆ. ಹಾಗೂ ಭಾರೀ ನಿರೀಕ್ಷೆ ಹುಟ್ಟಿಸಿದ್ದ ಸಿದ್ಧರಾಮಯ್ಯ ಅವರ ಕೋಲಾರ ಸ್ಪರ್ಧೆಗೂ ತೆರೆ ಬಿದ್ದಿದ್ದು, ಕೊತ್ತೂರು ಮಂಜುನಾಥ್‌ಗೆ ಟಿಕೇಟ್ ನೀಡಲಾಗಿದೆ.
ಇಲ್ಲಿಯವರೆಗೂ ೨೦೯ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿದ್ದು, ಇನ್ನೂ ೧೫ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯನ್ನು ಭಾಕಿ ಉಳಿಸಿಕೊಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post