ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ಮಾಡುವ ಮಹತ್ವದ ನಿರ್ಧಾರವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಕೈಗೊಂಡಿದೆ.
ಇಂದು ಮಧ್ಯಾಹ್ನ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದು, ಈ ಮೂಲಕ ಹೊಸ ವಿವಾದಕ್ಕೆ ನಾಂದಿ ಹಾಡಿದೆ.
ಯಾವೆಲ್ಲಾ ಪಠ್ಯಗಳಿಗೆ ಕೋಕ್? ಯಾವುದು ಸೇರ್ಪಡೆ?
ಸಭೆಯ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿರುವ ತಪ್ಪುಗಳನ್ನು ಸರಿಪಡಿಸಲಾಗಿದೆ. ಮಕ್ಕಳಿಗೆ ಈಗಾಗಲೇ ಪಠ್ಯ ಪುಸ್ತಕ ವಿತರಿಸಲಾಗಿದೆ. ಹೀಗಾಗಿ ಅವುಗಳನ್ನು ವಾಪಸ್ ಪಡೆದರೆ ಮತ್ತೆ ಕೋಟ್ಯಾಂತರ ರೂಪಾಯಿ ವೆಚ್ಚವಾಗುತ್ತದೆ. ಹೀಗಾಗಿ ಸೆಪ್ಲಿಮೆಂಟರಿ ಪುಸ್ತಕ ನೀಡಲಾಗುತ್ತದೆ. ಶಿಕ್ಷಣ ತಜ್ಞರ ಸಲಹೆ ಪಡೆದು ಸೆಪ್ಲಿಮೆಂಟರಿ ಪುಸ್ತಕ ನೀಡಲಾಗುತ್ತದೆ. ಇದರ ಜೊತೆಗೆ ಮಕ್ಕಳಿಗೆ ಯಾವ ಪಾಠ ಮಾಡಬೇಕು ಅನ್ನೋ ಮಾರ್ಗಸೂಚಿಯನ್ನು ಶಿಕ್ಷಕರಿಗೆ ನೀಡಲಾಗುತ್ತದೆ ಎಂದರು.
ಪ್ರಮುಖವಾಗಿ ಚಕ್ರವರ್ತಿ ಸೂಲೆಬೆಲೆ, ವೀರ ಸಾವಕರ್ ಪಠ್ಯವನ್ನು ತೆಗೆಯಲಾಗಿದೆ. ಇನ್ನು ಜವಾಹರ್ ಲಾಲ್ ನೆಹರೂ, ಡಾ. ಬಿ.ಆರ್. ಅಂಬೇಡ್ಕರ್, ಸಾವಿತ್ರಿ ಭಾಯಿ ಪುಲೆ ಸೇರಿದಂತೆ ಕೆಲ ಪಠ್ಯಗಳನ್ನು ಸೇರ್ಪಡೆಗೆ ಸಂಪುಟ ಸಭೆ ಅನುಮೋದನೆ ನೀಡಲಾಗಿದೆ ಎಂದಿದ್ದಾರೆ.
ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನುಕೈಬಿಡಲು ಸಂಪುಟ ನಿರ್ಧಾರ ಕೈಗೊಂಡಿದೆ.
ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದ್ದು, ಜುಲೈ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಮಾಡಲು ನಿರ್ಧರಿಸಲಾಗಿದೆ.
Also read: ಮುಕ್ತಾಯ ಹಂತದಲ್ಲಿ ವಿದ್ಯಾನಗರದ ರೈಲ್ವೇ ಮೇಲ್ಸೇತುವೆ ಕಾಮಗಾರಿ
ಎಪಿಎಂಸಿ ಕಾಯ್ದೆಗೆ ತಿದ್ದುಪಡಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ್ದ ಎಪಿಎಂಸಿ ಕಾಯ್ದೆಯ ತಿದ್ದುಪಡಿಯಿಂದ ರೈತರಿಗೆ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ, ಅದನ್ನು ರದ್ದು ಮಾಡಿ ಹಳೆಯ ಎಪಿಎಂಸಿ ಕಾಯ್ದೆಯನ್ನೇ ಮರು ಜಾರಿಗೊಳಿಸುವ ತೀರ್ಮಾನಕ್ಕೆ ಬರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post