ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ HDKumaraswamy ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು.
ಶಾಲಾ ಮಕ್ಕಳು ಪ್ರಯಾಸದಿಂದ ಬಸ್ ಹತ್ತಿತ್ತಿರುವ ವಿಡಿಯೋ ಒಂದನ್ನು ಟ್ಯಾಗ್ ಮಾಡಿರುವ ಮಾಜಿ ಮುಖ್ಯಮಂತ್ರಿ ಅವರು; ಶಕ್ತಿ ಯೋಜನೆಯ ಅಡ್ಡ ಪರಿಣಾಮಗಳ ಬಗ್ಗೆ ಕಿಡಿಕಾರಿದ್ದಾರೆ.

Also read: Congress will see it’s end in Karnataka for practicing hate politics: Basavaraj Bommai
ಶಕ್ತಿ ಯೋಜನೆಯ ಪರಿಣಾಮ ನಿತ್ಯವೂ ಶಾಲೆಗೆ ಹೋಗಬೇಕಾಗಿರುವ ಮಕ್ಕಳಿಗೆ ಬಸ್ಸುಗಳಲ್ಲಿ ಪ್ರಯಾಣಕ್ಕೆ ಸ್ಥಳಾವಕಾಶ ಸಿಗುತ್ತಿಲ್ಲ. ಶಿಕ್ಷಕರು, ಕಾರ್ಮಿಕರಿಗೂ ಇದೇ ದುಸ್ಥಿತಿ. ಆಟೋ, ಲಗೇಜ್ ಆಟೋ, ಗೂಡ್ಸ್ ವಾಹನಗಳನ್ನು ಹತ್ತಿ ಅಪಾಯಕಾರಿ ರಸ್ತೆಗಳಲ್ಲಿ ಮಕ್ಕಳು ಶಾಲೆಗೆ ಹೋಗಬೇಕು, ಮನೆಗೆ ವಾಪಸ್ಸು ಬರಬೇಕು ಎಂದು ಮಕ್ಕಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಶಕ್ತಿ ಯೋಜನೆ ಬಗ್ಗೆ ನನ್ನ ತಕರಾರು ಇಲ್ಲ. ಆದರೆ, ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಬೇಕು ಎನ್ನುವ ಬೇಡಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ. ರಾಜ್ಯ ಸರಕಾರ ಕೂಡಲೇ ಈ ಬಗ್ಗೆ ತುರ್ತುಕ್ರಮ ವಹಿಸಿ, ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎನ್ನುವುದು ನನ್ನ ಆಗ್ರಹವಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)









Discussion about this post