ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಡೀ ದೇಶದ ಜನರು ಶ್ರೀರಾಮಮಂದಿರದ Rama Mandira ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಯುತ್ತಿರುವಾಗ, ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎನ್ನುವ ಮೂಲಕ ಕಾಂಗ್ರೆಸ್ ತನ್ನ ದುರ್ಬುದ್ಧಿ ಹಾಗೂ ಕುತಂತ್ರ ರಾಜಕಾರಣ ತೋರಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ ಹೊರಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಎಲ್ಲ ಸಮುದಾಯಗಳು ಶ್ರೀರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕಾಯುತ್ತಿವೆ. ಆದರೆ ರಾಮಮಂದಿರದ ಕಾರ್ಯಕ್ರಮಕ್ಕೆ ಹೋಗದಿರುವುದು ಕಾಂಗ್ರೆಸ್‌ನ ದುರ್ಬುದ್ಧಿ ಹಾಗೂ ಕುತಂತ್ರ ರಾಜಕಾರಣ. ಮುಸ್ಲಿಮರ ಓಲೈಕೆಗಾಗಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಅವರಾದರೂ ನಮ್ಮ ಕೈ ಹಿಡಿಯಲಿ ಎಂಬ ಕಾರಣಕ್ಕೆ ಕಾಂಗ್ರೆಸ್ ನಾಯಕರು ಇಂತಹ ತೀರ್ಮಾನಕ್ಕೆ ಬಂದಿದ್ದಾರೆ. ಇದು ಕಾಂಗ್ರೆಸ್‌ಗೆ ಹಿಂದಿನಿಂದಲೇ ಬೆಳೆದು ಬಂದ ಚಾಳಿ ಎಂದರು.

ಶ್ರೀರಾಮಮಂದಿರ ಉದ್ಘಾಟನೆ ವೇಳೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯಾಗಲಿದೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಲ್ಲ ಕಡೆ ರಾಮ ಎನ್ನುತ್ತಾರೆ, ಸಿದ್ದರಾಮಯ್ಯನವರು ನನ್ನ ಹೆಸರಲ್ಲೇ ರಾಮ ಇದೆ ಎನ್ನುತ್ತಾರೆ. ಆದರೂ ಅವರು ಯಾರೂ ಉದ್ಘಾಟನೆಗೆ ಹೋಗುವುದಿಲ್ಲ. ಇಡೀ ದೇಶದ ಜನರು ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ನಾನು ಸಂಗ್ರಹಿಸಿದ ಆರೇಳು ಕೋಟಿ ರೂಪಾಯಿ ದೇಣಿಗೆಯಲ್ಲಿ ಸುಮಾರು 1 ಕೋಟಿ ರೂಪಾಯಿಯನ್ನು ಮುಸ್ಲಿಮರು ನೀಡಿದ್ದರು. ಕಾಂಗ್ರೆಸ್ ನಾಯಕರು ಕುತಂತ್ರ ಮಾಡಿ ಹಿಂದೂ ಮುಸ್ಲಿಮರನ್ನು ಒಡೆಯುತ್ತಿದ್ದಾರೆ. ಇಂತಹ ನೀಚ ಬುದ್ಧಿಗಳಿಗೆ ಶ್ರೀರಾಮನೇ ಬುದ್ಧಿ ಕಲಿಸುತ್ತಾನೆ. ಕಾಂಗ್ರೆಸ್ ನಾಯಕರಿಗೆ ಬುದ್ಧಿಭ್ರಮಣೆಯಾಗಿದೆ ಎಂದು ಹರಿಹಾಯ್ದರು.

ಬಿಜೆಪಿ ಸಭೆ
ಬಿಜೆಪಿ ಸಭೆಯ ಕುರಿತು ಮಾಹಿತಿ ನೀಡಿದ ಆರ್.ಅಶೋಕ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುವ ಕುರಿತು ಚರ್ಚಿಸಲಾಗಿದೆ. ಯಾವುದೇ ಅಭ್ಯರ್ಥಿಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ. ಆಭ್ಯರ್ಥಿಗಳ ಆಯ್ಕೆ ಬಗ್ಗೆ ಕೇಂದ್ರದ ನಾಯಕರು ಸಮೀಕ್ಷೆ ಮಾಡಿದ್ದು, ಎಲ್ಲವನ್ನೂ ಅವರೇ ತೀರ್ಮಾನಿಸುತ್ತಾರೆ ಎಂದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post