ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ Petrol, Diesel, Gas Cylinder ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ವಿರುದ್ಧ ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಕಾಂಗ್ರೆಸ್ ಮುಖಂಡರು ಇಂದು ಪ್ರತಿಭಟನೆ ನಡೆಸಿದರು.
“ಬೆಲೆಯೇರಿಕೆ ಮುಕ್ತ ಭಾರತ ಅಭಿಯಾನ” ನಿಮಿತ್ತದ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, D K Shivakumar ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, Siddaramaiah ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಧ್ರುವನಾರಾಯಣ್, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ, ಅಮರನಾಥ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.
Also read: ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಉಭಯ ಸದನಗಳ ಸಭಾ ನಾಯಕರ ಸಭೆ
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post