ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ #Biklu Shiva murder case ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ಶಾಸಕ ಬೈರತಿ ಬಸವರಾಜ್ #Congress MLA Byrati Basavaraj ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಬಲೆ ಬೀಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಜಾಕಾಲದ ಹೈಕೋರ್ಟ್ ಬೈರತಿ ಅವರಿಗೆ ಜಾಮೀನು ನೀಡಿತ್ತು. ಆದರೆ, ಈಗ ಜಾಮೀನು ರದ್ದಾಗಿದೆ. ಅಲ್ಲದೇ, ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಜಾಮೀನು ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಾಗಿದೆ.
ಇನ್ನು, ಬೈರತಿ ಬಸವರಾಜ್ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರ ಬಂಧನಕ್ಕೆ ಸಿಐಡಿ ಬಲೆ ಬೀಸಿದೆ. ಇದಕ್ಕಾಗಿಕ ಕಾನೂನು ತಜ್ಞರ ಮೊರೆ ಹೋಗಿದ್ದು, ಎಲ್ಲ ಆಯಾಮದಲ್ಲಿ ಪತ್ತೆಗೆ ಪ್ರಯತ್ನ ನಡೆಸಲಾಗುತ್ತಿದೆ.
ಇನ್ನು, ಯಾವುದೇ ರೀತಿಯಲ್ಲೂ ಸಹ ಫೋನ್ ಸಂಪರ್ಕಕ್ಕೆ ಬಸವರಾಜ್ ಸಿಗುತ್ತಿಲ್ಲ ಎಂದು ಹೇಳಲಾಗಿದ್ದು, ಪೊಲೀಸರಿಗೆ ಮಾತ್ರವಲ್ಲ ಕುಟುಂಬಸ್ಥರು ಹಾಗೂ ಆಪ್ತರಿಗೂ ಸಹ ಅವರ ಸುಳಿವು ದೊರೆತಿಲ್ಲ ಎಂದು ಹೇಳಲಾಗಿದೆ.
ಜಾಮೀನು ಅರ್ಜಿ ವಜಾಗೊಂಡ ಫೆಬ್ರವರಿ 3ರಂದು ಜಾತ್ರೆಯೊಂದರಲ್ಲಿ ಕಾಣಿಸಿಕೊಂಡಿದ್ದರು. ಆದರೆ, ಫೆ.4ರಿಂದ ಅವರು ನಾಪತ್ತೆಯಾಗಿದ್ದಾರೆ.
ಇನ್ನು, ಈ ಕುರಿತಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಯಾವ ಪಕ್ಷದವರೇ ಆದರೂ ಕಾನೂನಿನ ಮುಂದೆ ಎಲ್ಲರೂ ಸಮಾನರು. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಆಗುತ್ತದೆ ಎಂದಿದ್ದಾರೆ.
ಅಲ್ಲದೇ, ಬೈರತಿ ಬಸವರಾಜ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಶರಣಾದರೆ ಒಳ್ಳೆಯದು. ಇಲ್ಲದೇ ಇದ್ದರೆ ನಮ್ಮ ಪೊಲೀಸರು ಅವರನ್ನು ಪತ್ತೆ ಮಾಡಿ ಬಂಧಿಸುವುದು ನಿಶ್ಚಿತ. ಅದಕ್ಕೂ ಮುನ್ನ ನೀವು ಎಲ್ಲೇ ಇದ್ದರೂ ಸರೆಂಡರ್ ಆಗಿ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















