ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ Text Revision Controversy ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ, Siddaramaiah ಡಿ.ಕೆ. ಶಿವಕುಮಾರ್ D.K. Shivakumar ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಮುಖಂಡರು ಇಂದು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಿಎಂ ಬೊಮ್ಮಾಯಿ ಎಲ್ಲದರಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಪ್ರಸ್ತುತ ಪರಿಷ್ಕೃತ ಪಠ್ಯಪುಸ್ತಕವನ್ನು ಹಿಂಪಡೆಯಬೇಕು ಇಲ್ಲದಿದ್ದಲ್ಲಿ ನಾವು ಬೀದಿಗಿಳಿದು ಇನ್ನೂ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಇನ್ನಿತರ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post