No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಾಂಗ್ರೆಸ್ ರಾಜಕೀಯ ಬಿಟ್ಟು ಸೈನಿಕರನ್ನು ಬೆಂಬಲಿಸಬೇಕು: ವಿಪಕ್ಷ ನಾಯಕ ಅಶೋಕ

ಮೇ 15 ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 14, 2025
in ಬೆಂಗಳೂರು ನಗರ
0
ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ | ವಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಭಾರತೀಯ ಸೇನೆ #Indian Army 100 ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ #R Ashok ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನು ಆಡಬಾರದು. ಯುದ್ಧಕ್ಕೆ ಮುನ್ನ ಶಾಂತಿಯ ಮಾತು ಆಡುತ್ತಾರೆ, ಕದನ ವಿರಾಮವಾದಾಗ ಯುದ್ಧ ನಿಲ್ಲಿಸಿದ್ದೇಕೆ ಎಂದು ಪ್ರಶ್ನಿಸುತ್ತಾರೆ. ಜೊತೆಗೆ ಅಧಿವೇಶನ ನಡೆಸಬೇಕೆಂದು ಕೇಳುತ್ತಾರೆ. ಆದರೆ ಇದು ಅಧಿವೇಶನ ನಡೆಸುವ ಸಮಯವಲ್ಲ. ನಮ್ಮ ಯೋಧರು ಸಾಕ್ಷಿಗಳನ್ನು ನೀಡಿದ್ದಾರೆ. ಇನ್ನು ಮುಂದೆ ಯಾರೂ ಸಾಕ್ಷಿ ಕೇಳಬಾರದು. ಪಾಕ್‌ ಆಕ್ರಮಿತ ಕಾಶ್ಮೀರವನ್ನು ವಾಪಸ್‌ ಪಡೆಯುವ ಬಗ್ಗೆ, ಸಿಂದೂ ನದಿ ಒಪ್ಪಂದದ ಬಗ್ಗೆ ಪ್ರಧಾನಿ ಮೋದಿ ಈಗಾಗಲೇ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್‌ನವರು ರಾಜಕಾರಣ ಮಾಡುವುದು ಬಿಟ್ಟು ಯೋಧರಿಗೆ ಬೆಂಬಲ ನೀಡಬೇಕು. ಈ ಹಿಂದೆ ಪಿಒಕೆ ಬಿಟ್ಟುಕೊಟ್ಟಿದ್ದು, ಮುಂಬೈ ದಾಳಿ ಮೊದಲಾದವುಗಳ ಬಗ್ಗೆ ನಾವೇನೂ ಪ್ರಶ್ನೆ ಮಾಡುತ್ತಿಲ್ಲ. ಈ ಘಟನೆಗೆ ಇಂದಿರಾಗಾಂಧಿಯವರ ಹೋಲಿಕೆ ಮಾಡುವ ಅಗತ್ಯವಿಲ್ಲ. ಬಾಂಗ್ಲಾದೇಶದ ರಚನೆಯಾಯಿತು ಎನ್ನುವುದಾದರೆ ಪಿಒಕೆ ಯಾಕೆ ಬಿಟ್ಟಿದ್ದೀರಿ ಎಂಬ ಪ್ರಶ್ನೆ ಬರುತ್ತದೆ. ಆದರೆ ಇದರ ಬಗ್ಗೆ ನಾವ್ಯಾರೂ ಮಾತಾಡುತ್ತಿಲ್ಲ. ಇಂತಹ ಮಾತನಾಡಲು ಇದು ಸಮಯ ಅಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲಿಂದಲೂ ಯುದ್ಧ ಬೇಡ ಎಂದರು. ಕಾಂಗ್ರೆಸ್‌ ಪಕ್ಷ ಶಾಂತಿ ಎಂದು ಟ್ವೀಟ್‌ ಮಾಡಿತ್ತು. ಈ ನಡುವೆ ಸಚಿವ ಕೃಷ್ಣ ಭೈರೇಗೌಡ ಉಲ್ಟಾ ಮಾತಾಡುತ್ತಿದ್ದಾರೆ. ಇಲ್ಲಿ ನಾವು ಏನೇ ಮಾತಾಡಿದರೂ ಭಾರತೀಯ ಸೇನೆಯ ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ಕದನ ವಿರಾಮ ಕೂಡ ಸೇನಾಧಿಕಾರಿಗಳು ಕೈಗೊಂಡ ತೀರ್ಮಾನವಾಗಿದೆ. ಕದನ ವಿರಾಮಕ್ಕೆ ಯಾರದ್ದೇ ಮಧ್ಯಸ್ಥಿಕೆ ಇರಲಿಲ್ಲ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ. ಯಾರದ್ದೇ ಮಧ್ಯಸ್ಥಿಕೆಯನ್ನು ಭಾರತ ಒಪ್ಪಲ್ಲ ಎಂದರು.
ತಿರಂಗಾ ಯಾತ್ರೆ

ಯುದ್ಧ ಆರಂಭವಾಗುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ #PM Narendra Modi ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದರು. ಯೋಧರ ಜೊತೆ ನಾವೆಲ್ಲರೂ ಇದ್ದೇವೆ ಎಂದು ಹೇಳುವುದು ಪ್ರತಿ ಭಾರತೀಯರ ಕರ್ತವ್ಯ. ಅದಕ್ಕಾಗಿ ಬಿಜೆಪಿ ವತಿಯಿಂದ ತಿರಂಗಾ ಯಾತ್ರೆ ನಡೆಯಲಿದೆ. ಮೇ 15 ರಂದು ರಾಜಧಾನಿ ಸೇರಿದಂತೆ ಪ್ರಮುಖ ನಗರಗಳಲ್ಲಿ ಯಾತ್ರೆ ನಡೆಯಲಿದೆ. ಬೆಂಗಳೂರಿನಲ್ಲಿ ಮಲ್ಲೇಶ್ವರದ ಸಂಪಿಗೆಯ ರಸ್ತೆಯಲ್ಲಿ ಶಿರೂರು ಪಾರ್ಕ್‌ನಿಂದ 18 ನೇ ಕ್ರಾಸ್‌ವರೆಗೆ ತಿರಂಗಾ ಯಾತ್ರೆ ನಡೆಯಲಿದೆ. ಇದರಲ್ಲಿ ಪಕ್ಷದ ಚಿಹ್ನೆ ಇರುವುದಿಲ್ಲ. ರಾಷ್ಟ್ರಧ್ವಜ ಇರಲಿದೆ ಎಂದು ತಿಳಿಸಿದರು.

ಮೇ 16 ಮತ್ತು 17 ರಂದು ಜಿಲ್ಲಾ ಕೇಂದ್ರದಲ್ಲಿ, ಮೇ 18 ರಿಂದ 23 ರವರೆಗೆ ತಾಲೂಕು ಕೇಂದ್ರಗಳಲ್ಲಿ ಯಾತ್ರೆ ಮಾಡಲಾಗುವುದು. ಇದರಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಭಾರತೀಯ ಮಹಿಳೆಯರ ಸಿಂದೂರ ಮುಟ್ಟಿದರೆ ಏನಾಗುತ್ತದೆ ಎಂಬುದನ್ನು ಭಾರತೀಯ ಸೇನೆ ತೋರಿಸಿದೆ. 100 ಕ್ಕೂ ಅಧಿಕ ಉಗ್ರರು ಸತ್ತಿದ್ದಾರೆ. ತರಬೇತಿ ಕೇಂದ್ರಗಳು ನಾಶವಾಗಿದೆ. ಯುದ್ಧ ಕೈ ಬಿಡಿ ಎಂದು ಅಂಗಲಾಚುವ ಮಟ್ಟಕ್ಕೆ ಪಾಕಿಸ್ತಾನ ಬಂದಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

                                               

Tags: Bangaloreindian armyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaPM Narendra ModiR Ashokಆರ್. ಅಶೋಕಪ್ರಧಾನಿ ನರೇಂದ್ರ ಮೋದಿಬೆಂಗಳೂರುಭಾರತೀಯ ಸೇನೆ
Share196Tweet123Send
Previous Post

ಪಹಲ್ಗಾಮ್‌ ದಾಳಿ | ಮೃತ ಮಂಜುನಾಥ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Next Post

ಅಕ್ರಮ ಒತ್ತುವರಿ ನೆಪದಲ್ಲಿ ದೇವಾಲಯ ತೆರವು | ಸ್ಥಳೀಯರ ಆಕ್ರೋಶ | ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಕ್ರಮ ಒತ್ತುವರಿ ನೆಪದಲ್ಲಿ ದೇವಾಲಯ ತೆರವು | ಸ್ಥಳೀಯರ ಆಕ್ರೋಶ | ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ

ಅಕ್ರಮ ಒತ್ತುವರಿ ನೆಪದಲ್ಲಿ ದೇವಾಲಯ ತೆರವು | ಸ್ಥಳೀಯರ ಆಕ್ರೋಶ | ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

February 4, 2026
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

February 4, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

February 4, 2026
ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

February 4, 2026
ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

February 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL