ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಹಾಗೂ ಕಲಾಪವನ್ನು ಹಾಳು ಮಾಡುತ್ತಿರುವವರನ್ನು ಕೂಡಲೇ ಸದನದಿಂದ ಹೊರಹಾಕಿ. ಕಲಾಪವನ್ನು ನಡೆಸುವ ಶಕ್ತಿ ಸರಕಾರಕ್ಕೆ ಇಲ್ಲದಿದ್ದರೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿ. ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ #Former CM H D Kumaraswamy ಅವರು ಸರಕಾರಕ್ಕೆ ಒತ್ತಾಯಿಸಿದ್ದಾರೆ.
ವಿಧಾನಸಭೆ ಕಲಾಪವನ್ನು #Legislative Assembly ಸಭಾಧ್ಯಕ್ಷರು ಮುಂದೂಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಲಾಪವನ್ನು ಹಾಳು ಮಾಡುತ್ತಿರುವ ಕಾಂಗ್ರೆಸ್ ನಾಯಕರ #Congress Leaders ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಹಾಗೂ ರೈತರು, ಕಾರ್ಮಿಕರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಚರ್ಚೆ ಮಾಡುವುದು ಬಿಟ್ಟು ಕೇಸರಿ ಬಾವುಟದ ವಿಷಯ ಇಟ್ಟುಕೊಂಡು ಎರಡು ದಿನಗಳ ಕಲಾಪವನ್ನು ಹಾಳು ಮಾಡಿದರು. ಸಚಿವರೊಬ್ಬರ ರಾಜೀನಾಮೆ ಪಡೆಯಬೇಕು ಎಂಬುದನ್ನೇ ಪ್ರತಿಷ್ಠೆ ಮಾಡಿಕೊಂಡು ಜನರ ನಿರೀಕ್ಷೆಗಳನ್ನು ಅವಹೇಳನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಗುಡುಗಿದರು.
Also Read : ಕಾಂಗ್ರೆಸ್ ಸಮಾಜಗಳ ಮಧ್ಯೆ ವಿಷ ಬೀಜ ಬಿತ್ತಿ ರಾಜಕೀಯ ಮಾಡುತ್ತಿದೆ: ಚನ್ನಬಸಪ್ಪ ವಾಗ್ದಾಳಿ
ಹತ್ತು ನಿಮಿಷ ಧರಣಿ ಮಾಡುವುದು, ಆಮೇಲೆ ಸದನವನ್ನು ಮುಂದಕ್ಕೆ ಹಾಕುವುದು, ಕಲಾಪ ನಡೆಸುವ ರೀತಿ ಇದಲ್ಲ. ಯಾವ ಪುರುಷಾರ್ಥಕ್ಕೆ ಅಧಿವೇಶನವನ್ನು ಕರೆದಿದ್ದೀರಿ. ಸರಕಾರಕ್ಕೆ ಸದನವನ್ನು ಸಕ್ರಮವಾಗಿ ನಡೆಸುವ ಶಕ್ತಿ ಮತ್ತು ಬದ್ಧತೆ ಇಲ್ಲದಿದ್ದರೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದಕ್ಕೆ ಹಾಕಿ. ಸುಖಾ ಸುಮ್ಮನೆ ದಿನಕ್ಕೆ 1.5ಯಿಂದ 2 ಕೋಟಿ ರೂಪಾಯಿಯಷ್ಟು ಜನರ ತೆರಿಗೆಯನ್ನು ಯಾಕೆ ಪೋಲು ಮಾಡುತ್ತೀರಿ. ಕೇವಲ ಟಿಎ, ಡಿಎ ಪಡೆಯಲು ಕಲಾಪ ನಡೆಸಬೇಡಿ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಹಿಜಾಬ್ ಮತ್ತು ಕೇಸರಿ ಶಾಲು ವಿವಾದದಿಂದ #Hijab and Kesari shawl row ಶಿಕ್ಷಣ ವ್ಯವಸ್ಥೆ ಹಾಳಾಗಿದೆ. ಅಲ್ಲೆಲ್ಲಾ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಮಕ್ಕಳು ಹೊಡೆದಾದಿಕೊಳ್ಳುವ ಸನ್ನಿವೇಶ ಉಂಟಾಗಿದೆ. ಈ ವಿಷಯವನ್ನು ಸದನದಲ್ಲಿ ಚರ್ಚೆ ನಡೆಸಬೇಕಿತ್ತು. ಬೇಸಿಗೆ ಬರುವುದಕ್ಕೆ ಮುನ್ನವೇ ರಾಜ್ಯದಲ್ಲಿ ದಿನಕ್ಕೆ ಎರಡೂವರೆ ಗಂಟೆ ಕಾಲ ಲೋಡ್ ಶೆಡ್ಡಿಂಗ್ ಶುರುವಾಗಿದೆ. ವಿದ್ಯುತ್ ಕಡಿತದಿಂದ ರೈತರು ಬೆಳೆಗಳಿಗೆ ರಾತ್ರಿ ಹೊತ್ತು ನೀರು ಹರಿಸಬೇಕಾದ ಕಷ್ಟದ ಸ್ಥಿತಿ ಎದುರಾಗಿದೆ. ಆಡಳಿತಾರೂಢ ಪಕ್ಷಕ್ಕೆ ಮತ್ತು ಅಧಿಕೃತ ವಿರೋಧ ಪಕ್ಷಕ್ಕೆ ಇದರ ಬಗ್ಗೆ ಕಾಳಜಿ ಇಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳು ಕಲಾಪವನ್ನು ಹಾಳು ಮಾಡಿ ಜನರ ನಿರೀಕ್ಷೆಗಳನ್ನು ಕಾಲ ಕಸದಂತೆ ನೋಡುತ್ತಿವೆ. ಈ ವಿಷಯಗಳನ್ನು ಪ್ರಸ್ತಾಪ ಮಾಡಲು ಉದ್ದೇಶಿಸಿದ್ದೆ. ಆದರೆ ಅವಕಾಶ ಸಿಗಲಿಲ್ಲ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.
Also Read : ಮೃತ ವ್ಯಕ್ತಿಯಿಂದ ತಿರುಪತಿ ದೇಗುಲಕ್ಕೆ ಬಂದ ಬೃಹತ್ ಮೊತ್ತದ ದೇಣಿಗೆ ಎಷ್ಟು ಗೊತ್ತಾ?
ಕೇಸರಿ ಪವಿತ್ರ ವಸ್ತ್ರ:
ಹಿಂದೂಗಳ ಪಾಲಿಗೆ ಕೇಸರಿ ಪವಿತ್ರ ವಸ್ತ್ರವಾಗಿದ್ದು ಅದರ ಪಾವಿತ್ರ್ಯತೆಯನ್ನು ಯಾರು ಕೂಡ ಹಾಳು ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
ಹಿಂದೂ ಸಂಸ್ಕೃತಿ, ಪರಂಪರೆಯಲ್ಲಿ ಕೇಸರಿ ಬಣ್ಣ ಹಾಗೂ ಕೇಸರಿ ವಸ್ತ್ರಕ್ಕೆ ಪೂಜ್ಯ ಸ್ಥಾನವಿದೆ. ನಮ್ಮ ಪೂರ್ವಿಕರ ಕಾಲದಿಂದ ಇದು ನಡೆದುಕೊಂಡು ಬಂದಿದೆ. ಸರ್ವಸಂಗ ಪರಿತ್ಯಾಗಿಗಳು, ಸಂತರು, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಮಾಡುತ್ತಿರುವ ಪೂಜ್ಯರು ಕೇಸರಿ ವಸ್ತ್ರಗಳನ್ನು ಧರಿಸುತ್ತಾರೆ. ಆದರೆ ಬಿಜೆಪಿ, ಆರ್ ಎಸ್ ಎಸ್ #RSS ಮತ್ತದರ ಸಹ ಸಂಘಟನೆಗಳು ಕೇಸರಿ ಬಾವುಟವನ್ನು ಇಟ್ಟುಕೊಂಡೇ ಹೋರಾಟ ಮಾಡುತ್ತಿವೆ.
ಭಾರತವನ್ನು ಹಿಂದೂ ರಾಷ್ಟ್ರ #Hindu Nationa ಮಾಡಬೇಕು ಎನ್ನುವುದು ಆ ಸಂಘಟನೆಗಳ ಮಹದಾಸೆ. ಅವರ ಅಜೆಂಡಾ ಕೂಡ ಅದೇ. ಆ ಹಿನ್ನೆಲೆಯೊಳಗೆ ಸಚಿವ ಈಶ್ವರಪ್ಪ #Minister Eshwarappa ಅವರು ಮುಂದೊಂದು ದಿನ ಕೆಂಪುಕೋಟೆ #Red Fort ಮೇಲೂ ಕೇಸರಿ ಭಾವುಟವನ್ನು ಯಾರಾದರೂ ಹಾರಿಸಬಹುದು ಎಂದು ಹೇಳಿದ್ದರು. ನಾನೇ ಹಾರಿಸುತ್ತೇನೆ ಎಂದು ಅವರೇನೂ ಹೇಳಿಲ್ಲ. ಹೀಗಿದ್ದರೂ ಕಾಂಗ್ರೆಸ್ ಪ್ರತಿಷ್ಠೆಗೆ ಬಿದ್ದು ಕಲಾಪವನ್ನು ಹಾಳು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
Aslo Read: ಪುನೀತ್ ರಾಜ್‍ಕುಮಾರ್ ರಸ್ತೆ ಎಂದು ನಾಮಕರಣ ಮಾಡಲು ಬಿಬಿಎಂಪಿ ಅಧಿಕೃತ ಅನುಮೋದನೆ
ಕರ್ನಾಟಕ ಸೇರಿದಂತೆ ದಕ್ಷಿಣದ ಎಲ್ಲ ರಾಜ್ಯಗಳಲ್ಲಿಯೂ ಧ್ವಜ ಸ್ತಂಭಗಳನ್ನು ನೆಡುವ, ಅವುಗಳಲ್ಲಿ ತಮ್ಮ ಸಂಘಟನೆಗಳ ಭಾವುಟ ಹಾರಿಸುವುದು ಇದೆ. ನಮ್ಮಲ್ಲೂ ಕನ್ನಡ ಸಂಘಟನೆಗಳು ಕನ್ನಡ ಭಾವುಟವನ್ನು ಹಾರಿಸುತ್ತವೆ. ತಮಿಳುನಾಡಿನಲ್ಲಿಯೂ ಇಂಥ ದೃಶ್ಯಗಳನ್ನು ಕಾಣಬಹುದು. ಖಾಲಿ ಇರುವ ಧ್ವಜ ಸ್ತಂಭಗಳಲ್ಲಿ ಕೇಸರಿ ಭಾವುಟ ಹಾರಿಸುವುದನ್ನು ನೋಡಿದ್ದೇವೆ. ಈ ವಿಷಯವನ್ನು ದೊಡ್ಡದು ಮಾಡಿ ಸದನದ ಕಲಾಪವನ್ನು ಹಾಳು ಮಾಡುವುದು ಎಷ್ಟು ಸರಿ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.
ಎರಡೂ ರಾಷ್ಟ್ರೀಯ ಪಕ್ಷಗಳು ಜನರ ಹಿತ ಮರೆತು ವರ್ತಿಸುತ್ತಿವೆ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಪಕ್ಷದ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ವೆಂಕಟರಾವ್ ನಾಡಗೌಡ ಅವರು ಹಾಜರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post