ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೇಶದಲ್ಲಿ ಉಗ್ರ ದುಷ್ಕೃತ್ಯಕ್ಕೆ ಸಂಚು ರೂಪಿಸಿರುವ ಮಾಹಿತಿ ಹಾಗೂ ಶಂಕಿತ ಉಗ್ರ ನಾಸಿರ್ ನೀಡಿರುವ ಮಾಹಿತಿಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ NIA ಅಧಿಕಾರಿಗಳು ಬೆಂಗಳೂರಿನ 12 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.
ನಗರದಲ್ಲಿ ಬಂಧನವಾಗಿದ್ದ ಐವರು ಶಂಕಿತ ಉಗ್ರರ ಪ್ರಕರಣಕ್ಕೆ ಸಂಬAಧಿಸಿ ದಾಳಿಗಳು ನಡೆದಿವೆ. ಮುದಾಸಿರ್, ಜಾಹೀದ್, ತಬ್ರೇಜ್ ಮಹಮದ್ ಉಮರ್ ಸೇರಿ 5 ಜನರನ್ನು ಬಂಧಿಸಲಾಗಿತ್ತು. ಹೆಬ್ಬಾಳ ಠಾಣಾ ವ್ಯಾಪ್ತಿಯ ಸುಲ್ತಾನ್ ಪಾಳ್ಯದಲ್ಲಿ ಮೊದಲು ಸಿಸಿಬಿ ಅಧಿಕಾರಿಗಳು ಜುಲೈ 1ರಂದು ದಾಳಿ ಮಾಡಿದ್ದರು. ಈ ವೇಳೆ 7 ಪಿಸ್ತೂಲ್, 45 ಗುಂಡುಗಳು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು.
ಹೆಬ್ಬಾಳದಲ್ಲಿ ಗ್ರೇನೇಡ್ ದೊರೆತ ಪ್ರಕರಣದ ಬಗ್ಗೆ ಎಫ್’ಐಆರ್ ದಾಖಲಾಗಿತ್ತು. ಆರ್’ಟಿ ನಗರದ ಮನೆಯೊಂದರಲ್ಲಿ ಗ್ರೆನೇಡ್ ಹಾಗೂ ಪಿಸ್ತೂಲ್ ಸಿಕ್ಕಿತ್ತು. ಈ ಪ್ರಕರಣ ಎನ್’ಐಎಗೆ ವರ್ಗಾವಣೆಯಾಗಿದ್ದು, ತನಿಖಾ ಸಂಸ್ಥೆ ತೀವ್ರವಾಗಿ ತನಿಖೆ ನಡೆಸುತ್ತಿದೆ. ಬಂಧಿತ ಶಂಕಿತ ಉಗ್ರ ಈ ವಿಚಾರದಲ್ಲಿ ಹಲವು ಮಾಹಿತಿ ನೀಡಿದ್ದು, ಆತನಿಂದ ಪಡೆದ ಮಾಹಿತಿಯಂತೆ ದಾಳಿ ನಡೆಸಲಾಗಿದೆ.
Also read: ಚಿಕ್ಕಬಳ್ಳಾಪುರ | ಭೀಕರ ರಸ್ತೆ ಅಪಘಾತ | ದಂಪತಿ ದಾರುಣ ಸಾವು
ಇತ್ತೀಚೆಗಷ್ಟೇ ಕೇಸ್ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾವಣೆ ಆಗಿತ್ತು. ಸರಣಿ ಬಾಂಬ್ ಬ್ಲಾಸ್ಟ್ ರೂವಾರಿ ನಾಸೀರ್ ಜೈಲಿನಲ್ಲಿ ಈ ಶಂಕಿತರಿಗೆ ಭಯೋತ್ಪಾದಕ ಕೃತ್ಯಗಳ ತರಬೇತಿ ನೀಡಿದ್ದ ಎಂದು ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ದಾಳಿ ನಡೆದಿದ್ದು, ಯಾರನ್ನೂ ಬಂಧಿಸಿದ ಕುರಿತಾಗಿ ವರದಿಯಾಗಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post