ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಸುಕಿನ ಜಾವ ಸತತವಾಗಿ ಸುರಿದ ಮಳೆಯಿಂದಾಗಿ #Heavy rain in bangalore ಬೆಂಗಳೂರಿನ ಹಲವು ರಸ್ತೆಗಳು ಜಲಾವೃತವಾಗಿದ್ದು, ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ.
‘Traffic Advisory’
Chanasandara road condition has slowed down the traffic movement due to Rain. We are out here to assist you with the traffic movement. Kindly co-operate.
Call 112 for the immediate assistance during any Emergency 12.08.2024 Monday pic.twitter.com/djGw2Igj7z— WHITEFIELD TRAFFIC PS BTP (@wftrps) August 12, 2024
ವಾರದ ಆರಂಭ ದಿನವಾದ ಸೋಮವಾರ ಬೆಂಗಳೂರಿನ ಜನತೆಗೆ ಭಾರೀ ಮಳೆಯ ದರ್ಶನವಾಗಿದ್ದು, ಕಚೇರಿ, ಶಾಲೆ-ಕಾಲೇಜುಗಳಿಗೆ ಹೋಗುವವರಿಗೆ ತೊಂದರೆಯಾಗಿದೆ. ಅಷ್ಟೇ ಅಲ್ಲದೆ ರಾಜಧಾನಿಯ ಹಲವು ರಸ್ತೆಗಳು ಜಲಾವೃತವಾಗಿದ್ದು, ಇನ್ನು ಕೆಲವು ರಸ್ತೆಗಳು ಕೆಸರುಮಯವಾಗಿ ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಯಿತು.ಬೆಂಗಳೂರಿನ ಯಾವ ಯಾವ ಪ್ರದೇಶಗಳಲ್ಲಿ ಸಮಸ್ಯೆಯಾಗಿದೆ, ಜಲಾವೃತವಾಗಿದೆ, ಪ್ರಯಾಣಿಕರು ಯಾವ ಮಾರ್ಗದಲ್ಲಿ ಸಂಚಾರ ಮಾಡದಿದ್ದರೆ ಉತ್ತಮ, ಯಾವ ಮಾರ್ಗದಲ್ಲಿ ಸಂಚರಿಸಬೇಕು ಎಂಬ ಮಾಹಿತಿಯನ್ನು ನಗರ ಸಂಚಾರ ಪೊಲೀಸರು ನೀಡುತ್ತಿದ್ದಾರೆ.
Also read: ಟಿಬಿ ಡ್ಯಾಮ್ ಕ್ರಸ್ಟ್ ಗೇಟ್ ದುರಸ್ತಿ | ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಏನು?
ಹಲವು ಭಾಗಗಳಲ್ಲಿ ಮಧ್ಯರಾತ್ರಿಯೇ ಮಳೆ ಆರಂಭವಾಗಿದೆ. ಮೆಜೆಸ್ಟಿಕ್, ಓಕಳಿಪುರ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್ ಸರ್ಕಲ್, ಟೌನ್ಹಾಲ್, ಕೆ.ಆರ್.ಮಾರ್ಕೆಟ್, ತ್ಯಾಗರಾಜನಗರ, ಜಯನಗರ, ಹನುಮಂತನಗರ, ಶ್ರೀನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಮಾಗಡಿ ರಸ್ತೆ, ವಿಜಯನಗರ, ಕೆಂಗೇರಿ, ಶಿವಾನಂದ ಸರ್ಕಲ್, ಮೇಖ್ರಿ ಸರ್ಕಲ್, ಹೆಬ್ಬಾಳ, ಯಲಹಂಕ, ಕೆ.ಆರ್.ಪುರಂ ಸೇರಿದಂತೆ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಮುಂಭಾಗದ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post