No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅಭಿವೃದ್ಧಿಗೆ ಪ್ರೇರಣೆಯಾಗುವ ದೃಷ್ಟಿಯಿಂದ ಪ್ರಗತಿ ಪ್ರತಿಮೆ ನಿರ್ಮಾಣ: ಸಿಎಂ ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 10, 2022
in ಬೆಂಗಳೂರು ನಗರ
0
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನಮ್ಮ ಹೆಮ್ಮೆಯ ನಾಡಪ್ರಭುಗಳ ಹೆಸರಿನಲ್ಲಿರುವ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಪ್ರಗತಿ ಪ್ರತಿಮೆ ಅಭಿವೃದ್ಧಿಗೆ ಪ್ರೇರಣೆಯಾಗುವ ದೃಷ್ಟಿಯಿಂದ ನಿರ್ಮಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಅವರು ಇಂದು ಕೆಂಪೇಗೌಡರ ಕಂಚಿನ ಪ್ರತಿಮೆ Kempe Gowda Statue ಲೋಕಾರ್ಪಣೆ ಮತ್ತು ಪ್ರಧಾನಿ ನರೇಂದ್ರ ಮೋದಿ PM Narendra Modi ಅವರ ಸಾರ್ವಜನಿಕ ಸಭಾ ವೇದಿಕೆ ಕಾರ್ಯಕ್ರಮದ ಸಿದ್ಧತೆ ಮತ್ತು ವ್ಯವಸ್ಥೆಗಳ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿದೆ ಮಾತನಾಡಿದರು.
ಪ್ರಧಾನಿಗಳಿಂದ ಶಿಲ್ಪಿ ರಾಮ್ ಸುತಾರಾ ಅವರಿಗೆ ಅಭಿನಂದನೆ
ಕೆಂಪೇಗೌಡರ ಪ್ರಗತಿ ಪ್ರತಿಮೆಯನ್ನು ನಿರ್ಮಿಸಿದವರು ರಾಮ್ ಸುತಾರಾ. ಇಡೀ ಭಾರತದಲ್ಲಿ ಅತ್ಯಂತ ಶ್ರೇಷ್ಠ ಶಿಲ್ಪಿ. ಅಹಮದಾಬಾದ್‍ನಲ್ಲಿರುವ ವಲ್ಲಭಭಾಯಿ ಪಟೇಲ್ ಅವರ ಐಕ್ಯತಾ ಮೂರ್ತಿಯನ್ನೂ ಹಾಗೂ ಅಂಬೇಡ್ಕರ್ ಅವರ ಅತಿ ಎತ್ತರದ ಮೂರ್ತಿಯನ್ನು ನಿರ್ಮಿಸಿದ ಖ್ಯಾತಿ ಅವರದ್ದು. ನಾಳೆ ಪ್ರಧಾನಿಮಂತ್ರಿಗಳು ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಅವರ ಕೈಚಳಕದಿಂದ ಇಷ್ಟು ಬೃಹತ್ ಮೂರ್ತಿ ಮೈದಳೆದಿದೆ. ಸಮಸ್ತ ಕನ್ನಡ ನಾಡಿನ ಜನತೆಯ ಪರವಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಹೇಳಿದರು.

ಪ್ರಧಾನಿಗಳಿಂದ ಕನಕದಾಸ ಹಾಗೂ ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ
ನಾಳೇ ಪ್ರಧಾನಮಂತ್ರಿಗಳು ಬೆಳಿಗ್ಗೆ 9ಗಂಟೆಗೆ ಹೆ.ಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಪುಷ್ಪ ನಮನ ಮಾಡಲಿದ್ದಾರೆ. ಕನಕ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಆಗಮಿಸಿರುವುದು ಯೋಗಾಯೋಗಾ. ಒಬ್ಬ ಹಿಂದುಳಿದ ವರ್ಗಕ್ಕೆ ಸೇರಿದ ಪ್ರಧಾನಮಂತ್ರಿಗಳು ಸಮಸ್ತ ಮಾನವಕುಲಕ್ಕೆ ದಾರಿದೀಪವಾಗಿರುವ ಕನಕದಾಸರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವುದು ನಮ್ಮೆಲ್ಲರಿಗೂ ಸಂತೋಷ ತಂದಿದೆ. ಪಕ್ಕದಲ್ಲಿಯೇ ಇರುವ ವಾಲ್ಮೀಕಿ ಮೂರ್ತಿಗೂ ಪುಷ್ಪಾರ್ಚನೆ ಮಾಡಲಿದ್ದಾರೆ ಎಂದರು.
ವಂದೇ ಭಾರತ್ ರೈಲು – ಬಹುದಿನಗಳ ಬೇಡಿಕೆಯ ಈಡೇರಿಕೆ
ನಂತರ ರೈಲ್ವೇ ನಿಲ್ದಾಣದಲ್ಲಿ ವಂದೇ ಭಾರತ್ – ಹೈಸ್ಪೀಡ್ ರೈಲಿನ ಉದ್ಘಾಟನೆ ನೆರವೇರಿಸಲಿದ್ದಾರೆ. ಬೆಂಗಳೂರು- ಮೈಸೂರು, ಚನ್ನೈ ಕಡೆ ಪ್ರಯಾಣ ಮಾಡುವುದು, ಬೆಂಗಳೂರು- ಮೈಸೂರು ಪ್ರಯಾಣದ ಅವಧಿಯನ್ನು ಅತ್ಯಂತ ಕಡಿಮೆ ಸಮಯದಲ್ಲಿ ತಲುಪಬಹುದು. ಇದಕ್ಕಾಗಿ ಪ್ರಯಾಣಿಕರ ಬಹಳ ದಿನಗಳ ಬೇಡಿಕೆ ಇತ್ತು. ಅದನ್ನು ಪ್ರಧಾನಿಗಳು ವಂದೇ ಮಾತರಂ ಯೋಜನೆಯಲ್ಲಿ ಸೇರಿಸಿದ್ದು, ಭಾರತದಲ್ಲಿ ಐದನೇ ರೈಲು ಹಾಗೂ ದಕ್ಷಣ ಭಾರತದಲ್ಲಿ ಮೊದಲ ಹೈಸ್ಪೀಡ್ ರೈಲನ್ನು ಉದ್ಗಾಟನೆ ಮಾಡುತ್ತಿರುವುದು ಆ ಭಾಗದ ಪ್ರಯಾಣಿಕರಿಗೆ ಹಾಗೂ ಆರ್ಥಿಕ ಬೆಳವಣಿಗೆಗೂ ಕೂಡ ಅನುಕೂಲವಾಗಲಿದೆ ಎಂದರು.

ಟರ್ಮಿನಲ್ -2 ಉದ್ಘಾಟನೆ
ನಂತರ ವಿಮಾನನಿಲ್ದಾಣಕ್ಕೆ ಆಗಮಿಸಿ 2 ನೇ ಟರ್ಮಿನಲ್ ಉದ್ಘಾಟಿಸಲಿದ್ದಾರೆ. ಟರ್ಮಿನಲ್ -2 ಅಂತರರಾಷ್ಟ್ರೀಯ ಮತ್ತು ದೇಶೀಯ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಸುಮಾರು 25 ಲಕ್ಷ ಪ್ರಯಾಣಿಕರ ಸಾಮಥ್ರ್ಯವನ್ನು ಟರ್ಮಿನಲ್ ಹೊಂದಿದೆ. ಈಗಿರುವುದು 35 ಲಕ್ಷ ಸಾಮರ್ಥ್ಯವುಳ್ಳದ್ದು, ಇವೆರಡೂ ಸೇರಿದರೆ ದೇಶದ 2 ನೇ ಅತಿ ದೊಡ್ಡ ಮತ್ತು ಅತಿ ಹೆಚ್ಚು ಫುಟ್‍ಪ್ರಿಂಟ್ ವಿಮಾನ ನಿಲ್ದಾಣವಾಗಲಿದೆ. ದೆಹಲಿಯ ನಂತರ ಅತಿ ದೊಡ್ಡ ವಿಮಾನನಿಲ್ದಾಣವಾಗಲಿದೆ. ಅದರ ಉದ್ಘಾಟನೆಯ ನಂತರ ಪ್ರಗತಿ ಪ್ರತಿಮೆ ಅನಾವರಣ ಮಾಡಿ ಸಾರ್ವಜನಿಕ ಸಭೆಗೆ ತೆರಳುತ್ತಾರೆ. ಅಲ್ಲಿ ಭಾಷಣ ಮುಗಿಸಿ ಮುಂದಿನ ಪ್ರಯಾಣ ಮಾಡಲಿದ್ದಾರೆ ಎಂದು ವಿವರಿಸಿದರು.
2-3 ದಿನಗಳಲ್ಲಿ ಗುಂಡಿಗಳನ್ನು ಮುಚ್ಚಲಾಗುವುದು
ಕಾಂಗ್ರೆಸ್ ಪ್ರಧಾನಿಗಳ ಆಗಮನದ ಹಿನ್ನೆಲೆಯಲ್ಲಿ ಗುಂಡಿಗಳನ್ನು ಮುಚ್ಚುತ್ತಿರುವ ಬಗ್ಗೆ ಟೀಕೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ನಿರಂತರವಾಗಿ ನಡೆಯುತ್ತಿರುವ ಪ್ರಕ್ರಿಯೆ. 3-4 ದಿನಗಳಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಲಾಗುವುದು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಡಾ‌. ಸಿ‌. ಎನ್. ಅಶ್ವತ್ಥ್ ನಾರಾಯಣ, ಆರ್. ಅಶೋಕ್ , ಸಿ‌.ಸಿ. ಪಾಟೀಲ್ ಹಾಗೂ ಮತ್ತಿತರರು ಹಾಜರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteKempe Gowda StatueLatest News KannadaNewsinKannadaNewsKannadaPM Narendra Modiಕೆಂಪೇಗೌಡರ ಕಂಚಿನ ಪ್ರತಿಮೆಪ್ರಧಾನಿ ನರೇಂದ್ರ ಮೋದಿಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರ್ತವ್ಯ ಪ್ರಜ್ಞೆಯಿಂದ ಪ್ರತಿ ದಿನ ಒಂದು ತಾಸು ಹೆಚ್ಚಿಗೆ ಕೆಲಸ ಮಾಡಿ: ಸಿಎಂ ಬೊಮ್ಮಾಯಿ ಕರೆ

Next Post

ಲವ್ ಫೇಲ್ಯೂರ್: ಫೇಸ್ ಬುಕ್ ಲೈವ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಲವ್ ಫೇಲ್ಯೂರ್: ಫೇಸ್ ಬುಕ್ ಲೈವ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಲವ್ ಫೇಲ್ಯೂರ್: ಫೇಸ್ ಬುಕ್ ಲೈವ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL