ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಮಹತ್ವದ ಘೋಷಣೆ ಮಾಡಿದರು.
ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಿರಿಧಾನ್ಯ Cereals ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದರು.

Also read: ರಾಜ್ಯ ಮಟ್ಟದ ಪ್ರಶಸ್ತಿಗೆ ಲಕ್ಷ್ಮಿ ಎಸ್. ಭದ್ರಾವತಿ ಆಯ್ಕೆ
ಹಾಗೆಯೇ ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹದಾಯಕವಾಗಿ ಅಗತ್ಯ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.
ಎಲ್ಲಿ ಮಳೆ ಕಡಿಮೆ ಬೀಳುತ್ತದೆಯೋ, ಭೂಮಿಯ ಫಲವತ್ತತೆ ಕಡಿಮೆ ಇರುವ ಪ್ರದೇಶಗಳಲ್ಲೂ ಬೆಳೆಯಬಹುದಾದ ಸಿರಿಧಾನ್ಯ ಉತ್ತಮ ಆರೋಗ್ಯಕ್ಕೆ ಬಹಳ ಸಹಕಾರಿ. ಇದಕ್ಕಾಗಿ ರಾಜ್ಯ ಸರ್ಕಾರ ನಿರಂತರವಾಗಿ ಸಿರಿಧಾನ್ಯ ಮೇಳವನ್ನು ನಿರಂತರವಾಗಿ ಆಯೋಜಿಸುತ್ತಿದೆ ಎಂದರು.

2004 ರಲ್ಲಿ ಸಾವಯವ ಕೃಷಿ ನೀತಿ, 2014 ರಲ್ಲಿ ಪರಿಷ್ಕೃತ ಸಾವಯವ ಕೃಷಿ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ. ಆ ಮೂಲಕ ಸವಯವ ಮತ್ತು ಸಿರಿಧಾನ್ಯ ಬೆಳೆ ಬೆಳೆಯಲು ನಮ್ಮ ಸರ್ಕಾರ ನಿರಂತರವಾಗಿ ಉತ್ತೇಜನ ನೀಡುತ್ತಿದೆ. ಇದರಿಂದ ಜನರ ಆರೋಗ್ಯಕ್ಕೂ ಬಹಳ ಸಹಕಾರಿಯಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ Minister Cheluvarayaswamy ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, Shobha Karndlaje ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, Dinesh Gundurao ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಉತ್ತರ ಪ್ರದೇಶ ಸರ್ಕಾರದ ಕೃಷಿ ಸಚಿವರಾದ ಸೂರ್ಯ ಪ್ರತಾಪ್ ಸಾಹಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರುಗಳಾದ ವಿನಯ್ ಕುಲಕರ್ಣಿ, ಸುಧಾಮ ದಾಸ್, ರಾಜೂಗೌಡ, ವಿನಯ್ ಕುಲಕರ್ಣಿ, ದಿನೇಶ್ ಗೂಳಿಗೌಡ, ಕೋನರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post