ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದಾದ್ಯಂತ ಎಲ್ಲ ಕನ್ನಡಿಗರಿಗೂ ಕೊರೋನಾ ಲಸಿಕೆ ಒದಗಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಸಹಕಾರ ನೀಡುತ್ತಿದೆ ಎಂದು ಸಚಿವ ಡಾ. ಸುಧಾಕರ್ ಹೇಳಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಜೂನ್ ತಿಂಗಳಿನಲ್ಲಿ ಕೇಂದ್ರ ಸರ್ಕಾರದಿಂದ ಪೂರೈಕೆಯಾಗಲಿರುವ 45 ಲಕ್ಷ ಡೋಸ್ ಲಸಿಕೆ ಮತ್ತು ರಾಜ್ಯ ಸರ್ಕಾರ ಖರೀದಿಸುತ್ತಿರುವ ಲಸಿಕೆ ಪೈಕಿ 13.7 ಲಕ್ಷ ಡೋಸ್ ಸೇರಿದಂತೆ ಒಟ್ಟು 58.71 ಲಕ್ಷ ಡೋಸ್ ಕೊರೊನಾ ಲಸಿಕೆ ರಾಜ್ಯಕ್ಕೆ ಪೂರೈಕೆಯಾಗಲಿದೆ ಎಂದಿದ್ದಾರೆ.
ಎಲ್ಲ ಕನ್ನಡಿಗರಿಗೂ ಲಸಿಕೆ ಒದಗಿಸಲು ಕೇಂದ್ರ ಸರ್ಕಾರ ನೀಡುತ್ತಿರುವ ನಿರಂತರ ಸಹಕಾರ ಶ್ಲಾಘನೀಯ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post