ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೇಶದಾದ್ಯಂತ ಕೊರೋನಾ 4ನೆಯ Corona 4th Wave ಆತಂಕದ ಬೆನ್ನಲ್ಲೇ ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದು ಆತಂಕಕ್ಕೆ ಕಾರಣವಾಗಿದೆ.
ನಿನ್ನೆ ಚೀನಾದಿಂದ ಬೆಂಗಳೂರಿಗೆ ಬಂದಿದ್ದ 35 ವರ್ಷದ ವ್ಯಕ್ತಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಪರೀಕ್ಷೆ ವೇಳೆ ಕೊರೋನಾ ಪಾಸಿಟಿವ್ ಇರುವುದು ಕಂಡು ಬಂದಿದೆ.
ದೇಶದಲ್ಲಿ ಕೊರೋನಾ ರೂಪಾಂತರಿ ಬಿಎಫ್ 7 BF 7 ಪತ್ತೆ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ವಿದೇಶಗಳಿಂದ ಬರುತ್ತಿರುವವರ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಈ ಬೆಳವಣಿಗೆ ನಡುವೆಯೇ ಚೀನಾದಿಂದ ಬಂದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ಐಸೊಲೇಷನ್’ಗೆ ಒಳಪಡಿಸಲಾಗಿದೆ.
Also read: ಶ್ರೀ ಪೇಜಾವರ ವಿಶ್ವೇಶ್ವತೀರ್ಥರ ಜೀವನಾದರ್ಶ ಎಲ್ಲರಿಗೂ ಅನುಕರಣೀಯ
ಕಳೆದ ಮೂರು ದಿನಗಳಲ್ಲಿ ವಿದೇಶಗಳಿಂದ ಬಂದ ೯ ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಐದು ಮಂದಿಯನ್ನು ಹೋಂ ಕ್ವಾರಂಟೀನ್’ನಲ್ಲಿ ಇರಿಸಲಾಗಿದ್ದು, ನಾಲ್ವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















