ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೆಮ್ಮಿನಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದು, ವರದಿಯಲ್ಲಿ ಸೋಂಕಿರುವುದು ದೃಢಪಟ್ಟಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿದ್ದಾರೆ. ೨ನೇ ಅಲೆ ಸಂದರ್ಭದಲ್ಲೂ ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿತ್ತು.
ಗಣ್ಯರ ಹಾರೈಕೆ:
ಮಾಜಿ ಪ್ರಧಾನಿ ದೇವೇಗೌಡರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿರುವ ಬೆನ್ನಲ್ಲೆ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಹಾರೈಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಮಾತನಾಡಿ, ದೇವೇಗೌಡರಿಗೆ ಕೋವಿಡ್‌ನ ತೀವ್ರತೆ ಇರಲಿಕ್ಕಿಲ್ಲ. ಈ ವಯಸ್ಸಿನಲ್ಲೂ ಅವರು ಆರೋಗ್ಯವಾಗಿದ್ದಾರೆ. ಆದರೆ, ಕೋವಿಡ್ ಯಾರನ್ನೂ ಬಿಟ್ಟಿಲ್ಲ. ಮಾಜಿ ಪ್ರಧಾನಿಗಳು, ಅವರ ಕುಟುಂಬ ಸದಸ್ಯರು ಹಾಗೂ ಮಣಿಪಾಲ್ ಆಸ್ಪತ್ರೆಯ ವೈದ್ಯರ ಜತೆ ಮಾತನಾಡುತ್ತೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post