No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕೊರೊನಾ ಎರಡನೇ ಅಲೆ-ಜನರನ್ನು ಭೀತಿಗೊಳಿಸಬೇಡಿ, ವೈಜ್ಞಾನಿಕವಾಗಿ ನಡೆದುಕೊಳ್ಳುವಂತೆ ಮಾಡಿ: ಸಿದ್ದರಾಮಯ್ಯ

kalpa News by kalpa News
March 26, 2021
in Small Bytes, ಬೆಂಗಳೂರು ನಗರ, ರಾಜಕೀಯ
0
ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ: ಸಿದ್ಧರಾಮಯ್ಯ ಆಗ್ರಹ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು : ಕೋವಿಡ್‌ನ ಎರಡನೇ ಅಲೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಅತ್ಯಂತ ವೈಜ್ಞಾನಿಕವಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ಜನರನ್ನು ಹೆಚ್ಚುMask ಭೀತಿಗೆ ಒಳಪಡಿಸದೇ ಆರ್ಥಿಕ ಚಟುವಟಿಕೆಗಳನ್ನು ನಿರ್ಬಂಧಿಸದೆ ಜನರು ವೈಜ್ಞಾನಿಕವಾಗಿ ನಡೆದುಕೊಳ್ಳುವಂತೆ ತಿಳುವಳಿಕೆಯನ್ನು ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಕಡ್ಡಾಯವಾಗಿ ಮಾಸ್ಕ್ ಧರಿಸುವ, ಸ್ಯಾನಿಟೈಸರ್ ಬಳಸುವ, ಸಣ್ಣ ರೋಗ ಲಕ್ಷಣಗಳು ಕಂಡು ಬಂದರೂ ಜನರೊಂದಿಗೆ ಬೆರೆಯದೆ ಪ್ರತ್ಯೇಕವಾಗಿ ಉಳಿಯುವ, ಪರೀಕ್ಷೆ ಮಾಡಿಸಿಕೊಳ್ಳುವ ಮುಂತಾದವುಗಳನ್ನು ಸ್ವಯಂಪ್ರೇರಿತವಾಗಿ ಮುಂಜಾಗರೂಕ ಕ್ರಮಗಳನ್ನು ಕೈಗೊಳ್ಳಲು ಉತ್ತೇಜಿಸಬೇಕು ಎಂದು ಸಲಹೆ ನೀಡಿದ್ದಾರೆ.
ಪತ್ರದ ಮುಖ್ಯಾಂಶಗಳು :
ಸರ್ಕಾರ ಕೋವಿಡ್ ಸಾವುಗಳ ವಿಚಾರದಲ್ಲೂ ಕೂಡ ಸುಳ್ಳು ಹೇಳುತ್ತಿದೆ. ಇದುವರೆಗೂ ರಾಜ್ಯದಲ್ಲಿ 12,449 ಜನರು ಮೃತಪಟ್ಟಿದ್ದಾರೆ ಎಂದು ಮಾಹಿತಿ ಬಿಡುಗಡೆ ಮಾಡಿದೆ. ಆದರೆ ರಾಜ್ಯ ಸರ್ಕಾರದ ಸಾಂಖ್ಯಿಕ ಇಲಾಖೆಯು ಸಂಗ್ರಹಿಸುವ ಜನನ, ಮರಣಗಳ ಅಂಕಿ ಅಂಶಗಳ ಪ್ರಕಾರ ಸಾವುಗಳ ಸಂಖ್ಯೆ ಹೆಚ್ಚಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸರ್ಕಾರ ರಾಜ್ಯದಲ್ಲಿ ಕೊರೋನಾ ಸಾವುಗಳ ಪ್ರಮಾಣ ಶೇ.1.4 ರಷ್ಟು ಇದೆ. ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳಿಂದಾಗಿ ಸಾವುಗಳ ಸಂಖ್ಯೆ ಕಡಿಮೆಯಾಗಿದೆ ಎಂದು ತನ್ನ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ. ಕೊರೋನಾ ಸಾವುಗಳಲ್ಲಿ ರಾಜ್ಯವು ದೇಶದಲ್ಲಿ 19ನೇ ಸ್ಥಾನದಲ್ಲಿದೆ ಎಂದು ಹೇಳುತ್ತಿದೆ. ಆದರೆ ಡಿಸೆಂಬರ್ ಅಂತ್ಯದವರೆಗಿನ ಮಾಹಿತಿಯನ್ನು ನೋಡಿದರೆ ರಾಜ್ಯದಲ್ಲಿ ಸಾವಿನ ಪ್ರಮಾಣ ಸುಮಾರು ಶೇ.2.6 ರಷ್ಟಿದೆ ಎಂದಿದ್ದಾರೆ.
ಇದರಿಂದಾಗಿ ದೇಶದಲ್ಲಿ ಕೋವಿಡ್ ಕಾರಣದಿಂದಾಗಿ ಅತಿ ಹೆಚ್ಚು ಮರಣ ಹೊಂದಿದ ರಾಜ್ಯಗಳಲ್ಲಿ ಕರ್ನಾಟಕವು ಪಂಜಾಬ್ ನಂತರದ 2ನೇ ಸ್ಥಾನದಲ್ಲಿ ಇದೆ. ರಾಜ್ಯದಲ್ಲಿ ಕೊರೋನಾ ಸಂಬಂಧಿತ ಸಾವುಗಳು ಕಡಿಮೆಯಾಗಿಲ್ಲ. ಸತ್ತವರ ಸಂಖ್ಯೆಯನ್ನು ಬಚ್ಚಿಟ್ಟು ಸುಳ್ಳು ಲೆಕ್ಕ ತೋರಿಸಿ ಜನರನ್ನು ಯಾಮಾರಿಸುತ್ತಿದೆ. ಸಾವುಗಳನ್ನು ಬಚ್ಚಿಟ್ಟು ಸುಳ್ಳು ಹೇಳುವುದು ಸರ್ಕಾರದ ಅಮಾನವೀಯ ನಿಲುವು ಮತ್ತು ನಂಬಿಕೆ ದ್ರೋಹವಾಗಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿದೆ. ರಾಜ್ಯ ಸರ್ಕಾರವು ಇನ್ನೂ ಎಚ್ಚೆತ್ತುಕೊಂಡಿಲ್ಲ. ಟೆಸ್ಟ್‌ಗಳ ಸಂಖ್ಯೆಯನ್ನು ಹೆಚ್ಚು ಮಾಡಿಲ್ಲ. ಮಾರ್ಚ್ 21ರಂದು ರಂದು 78,178 ಜನರ ಪರೀಕ್ಷೆ ಮಾಡಲಾಗಿದೆ. ಮಾರ್ಚ್ 23ರಂದು 98,733 ಜನರ ಪರೀಕ್ಷೆಗಳನ್ನು ನಡೆಸಲಾಗಿದೆ. ಇದು ಬೇರೆ ರಾಜ್ಯಗಳಿಗೆ ಹೋಲಿಸಿದರೆ ಪರೀಕ್ಷೆಗಳ ಪ್ರಮಾಣ ಬಹಳ ಕಡಿಮೆ ಇದೆ ಎಂದಿದ್ದಾರೆ.
ದೆಹಲಿಯಲ್ಲಿ ಒಂದು ಮಿಲಿಯನ್ ಜನಕ್ಕೆ 8.34 ಲಕ್ಷ ಟೆಸ್ಟ್‌ಗಳನ್ನು ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ 4.62 ಲಕ್ಷ ಟೆಸ್ಟ್‌ಗಳನ್ನು ಮಾಡಲಾಗಿದೆ. ಕೇರಳದಲ್ಲಿ 3.04 ಲಕ್ಷ ಟೆಸ್ಟ್‌ಗಳನ್ನು ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ಇದುವರೆಗೆ ಕೇವಲ 2.93 ಲಕ್ಷ ಟೆಸ್ಟ್‌ಗಳನ್ನು ಮಾಡಲಾಗಿದೆ. ನನಗಿರುವ ಮಾಹಿತಿಯಂತೆ ಈ ಟೆಸ್ಟ್‌ಗಳ ಸಂಖ್ಯೆಯನ್ನು ಕೂಡ ಉತ್ಪ್ರೇಕ್ಷಿಸಿ ಹೇಳಲಾಗುತ್ತಿದೆ. ಒಬ್ಬರಿಗೆ ಟೆಸ್ಟ್ ಮಾಡಿ 3-4 ಜನರಿಗೆ ಟೆಸ್ಟ್ ಮಾಡಿದ್ದೇವೆ ಎಂದು ಕೆಲವು ಖಾಸಗಿ ಲ್ಯಾಬೊರೇಟರಿಗಳು ಸುಳ್ಳು ಬಿಲ್ಲುಗಳನ್ನು ಕ್ಲೇಮು ಮಾಡಿಕೊಂಡಿವೆ ಎಂಬ ಮಾಹಿತಿ ಇದೆ. ಇದೆಲ್ಲವೂ ಮುಂದಿನ ದಿನಗಳಲ್ಲಿ ಹೊರ ಬರಲಿದೆ. ಕೋವಿಡ್ ಭ್ರಷ್ಟಾಚಾರದ ಬಗ್ಗೆ ಕೂಡ ಸರ್ಕಾರ ತನಿಖೆ ಮಾಡಿಸಲಿಲ್ಲ ಎಂದು ಹೇಳಲಾಗಿದೆ.

ಸರ್ಕಾರ ಕೊರೋನಾ ವಾರಿಯರ್‌ಗಳು ಎಂದು ಬರಿ ಬಾಯಿ ಮಾತಿಗೆ ಹೇಳಿತೆ ಹೊರತು ಕೊರೋನಾದಿಂದ ಮೃತಪಟ್ಟ ಅನೇಕರ ಕುಟುಂಬಗಳಿಗೆ ಇನ್ನೂ ಪರಿಹಾರವನ್ನೇ ನೀಡಿಲ್ಲ. ಕುಶಲ ಕರ್ಮಿಗಳು ಹಾಗೂ ದುಡಿಯುವ ಕೆಲವೇ ಸಮುದಾಯಗಳಿಗೆ ಘೋಷಿಸಿದ್ದ ಪರಿಹಾರವನ್ನು ಕೂಡ ಸಮರ್ಪಕವಾಗಿ ವಿತರಿಸಲಿಲ್ಲ. ಈಗಲೂ ಈ ಸಮುದಾಯಗಳ ವೃತ್ತಿನಿರತರ ಬದುಕು ಸುಧಾರಣೆಯಾಗಿಲ್ಲ. ಹಾಗಾಗಿ ಅವರೆಲ್ಲರಿಗೂ ಪರಿಹಾರವನ್ನು ನೀಡಬೇಕು. ನಾನು ಪದೇ ಪದೇ ಪ್ರಸ್ತಾಪಿಸುತ್ತಿದ್ದೇನೆ. ದುಡಿಯುವ ಜನರ ಕೈಯಲ್ಲಿ ಹಣ ಇದ್ದರೆ ದೇಶದ ಆರ್ಥಿಕತೆ ಆರೋಗ್ಯಕರವಾಗಿರುತ್ತದೆ ಎಂದಿದ್ದಾರೆ.

ಸರ್ಕಾರ ಹೆಚ್ಚು ಪರೀಕ್ಷೆಗಳನ್ನು ಮಾಡುವ ಮೂಲಕ ಹಾಗೂ ಸುರಕ್ಷತಾ ಲಸಿಕೆಗಳನ್ನು ನೀಡುವ ಮೂಲಕ, ವಯಸ್ಸಾದ ಹಿರಿಯರನ್ನು ಮತ್ತು ಇತರೆ ಸಹ ಅಸ್ವಸ್ಥತೆಗಳನ್ನು ಹೊಂದಿರುವವರ ಆರೋಗ್ಯವನ್ನು ವಿಶೇಷವಾಗಿ ಪರಿಗಣಿಸಿ ಎಚ್ಚರಿಕೆಯನ್ನು ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡು ಜನರ ಆರೋಗ್ಯವನ್ನು ರಕ್ಷಿಸುವ ಜೊತೆಯಲ್ಲಿಯೇ ಅವರ ಆರ್ಥಿಕ ಆರೋಗ್ಯವನ್ನು ಕೂಡ ರಕ್ಷಿಸಬೇಕಾಗಿದೆ. ಇಲ್ಲದಿದ್ದರೆ ಇಡೀ ದೇಶದ ಆರ್ಥಿಕ ಚೈತನ್ಯಕ್ಕೆ ಲಕ್ವಾ ಹೊಡೆದಂತಾಗುತ್ತದೆ. ಈಗಾಗಲೇ ನಮ್ಮ ಆರ್ಥಿಕತೆ ಐಸಿಯು ಗೆ ಹೋದ ರೋಗಗ್ರಸ್ಥನಂತಾಗಿದೆ. ಸರ್ಕಾರ ತಜ್ಞರ, ಮುತ್ಸದ್ದಿಗಳೊಂದಿಗೆ ಸಮಾಲೋಚಿಸಿ ಪರಿಸ್ಥಿತಿಯನ್ನು ನಿಯಂತ್ರಿಸಬೇಕು ಎಚ್ಚರಿಕೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreCM BS YadiyurappaCorona VaccineCorona WarriorsCOVID 19Kannada News WebsiteKarnatakaLatest News KannadaLocal NewsMaskPolitical NewsSiddharamaiahSocial DistanceState Newsಬೆಂಗಳೂರು
Share223Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾರ್ವಜನಿಕರನ್ನು ಕಚೇರಿಗೆ ಪದೇ ಪದೇ ಅಲೆದಾಡಿಸಬೇಡಿ: ಚಳ್ಳಕೆರೆ ಡಿವೈಎಸ್’ಪಿ ಸಲಹೆ

Next Post

ಅಪ್ರಾಪ್ತ ಬಾಲಕಿ ಅಪಹರಣ: ಆರೋಪಿ ಬಂಧನ

kalpa News

kalpa News

Next Post
ಅಪ್ರಾಪ್ತ ಬಾಲಕಿ ಅಪಹರಣ: ಆರೋಪಿ ಬಂಧನ

ಅಪ್ರಾಪ್ತ ಬಾಲಕಿ ಅಪಹರಣ: ಆರೋಪಿ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL