ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಗೆ ಕೊರೋನಾ ದೃಢಪಟ್ಟಿದ್ದು, ಹೋಂ ಕ್ವಾರಂಟೈನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಜ್ವರ ನೆಗಡಿ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಹಿರಿಯ ನಾಯಕ ಖಂರ್ಗೆ ಎರಡು ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಸ್ಯಾಂಪಲ್ ನೀಡಿದ್ದು, ಆರ್‌ಟಿಪಿಸಿಆರ್ ಟೆಸ್ಟ್‌ನಲ್ಲಿ ಸೋಂಕು ದೃಢಪಟ್ಟಿದೆ.
ಬೆಳಿಗ್ಗೆ ಆಸ್ಪತ್ರೆಗೆ ಸ್ವಯಂ ತೆರಳಿ ವಾಪಸ್ ಆಗಿ ಕ್ವಾರಂಟಿನ್ ಮೊರೆ ಹೋಗಿರುವ ವಿಪಕ್ಷ ನಾಯಕರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಕಾಂಗ್ರೆಸ್ ಪಾದಯಾತ್ರೆಗೆ ಖರ್ಗೆ ಚಾಲನೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಗೆ ಕೊರೋನಾ:
ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಎಂ. ವೀರಪ್ಪ ಮೊಯ್ಲಿ ಅವರು ಬುಧವಾರ ಸಂಜೆ ಕೊರೋನಾ ದೃಢಪಟ್ಟಿದ್ದು, ತಾವು ಹೋಮ್ ಕ್ವಾರಂಟೈನ್‌ನಲ್ಲಿದ್ದೇನೆ. ಇತ್ತೀಚೆಗೆ ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರನ್ನು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಟ್ವೀಟರ್‌ನಲ್ಲಿ ವಿನಂತಿಸಿದ್ದಾರೆ.
This evening I tested positive for COVID-19. While I am having symptoms (cough & fever), I’m grateful to be fully vaccinated, which is protecting me from more severe illness.
I am under home quarantine & request everyone who have recently come in my contact to get tested.— Dr. M. Veerappa Moily (@moilyv) January 12, 2022
ಮೊಯ್ಲಿ ಅವರ ಟ್ವೀಟ್ ಹೀಗಿದೆ, ಈ ಸಂಜೆ ನಾನು ಕೋವಿಡ್-೧೯ಗೆ ಪರೀಕ್ಷೆ ಮಾಡಿಸಿದ್ದು, ಸೋಂಕು ದೃಢಪಟ್ಟಿದೆ. ನನಗೆ ರೋಗ ಲಕ್ಷಣಗಳು (ಕೆಮ್ಮು ಮತ್ತು ಜ್ವರ) ಇದ್ದು, ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡಿದ್ದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ. ಇದು ನನ್ನನ್ನು ಹೆಚ್ಚು ತೀವ್ರವಾದ ಅನಾರೋಗ್ಯದಿಂದ ರಕ್ಷಿಸುತ್ತಿದೆ. ತಾನು ಹೋಮ್ ಕ್ವಾರಂಟೈನ್‌ನಲ್ಲಿದ್ದು, ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರನ್ನು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿ ಎಂದು ಟ್ವೀಟ್ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post