ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮತ್ತೆ ಕೊರೋನಾ ಸೋಂಕು ದೃಢಪಟ್ಟಿದ್ದು, ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಅವರನ್ನು ಇಂದು ಮಧ್ಯಾಹ್ನ ನಗರದ ಎಮ್.ಎಸ್. ರಾಮಯ್ಯ ಆಸ್ಪತ್ರೆಗೆ ತಪಾಸಣೆಗೆ ಹಾಜರಾಗಿದ್ದ ಸಂದರ್ಭದಲ್ಲಿ ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ವರದಿ ಬಂದಿದೆ.
ಇದೀಗ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಇದು ಎರಡನೆಯ ಬಾರಿ ಕೊರೋನಾ ಬರುತ್ತಿರುವುದು. ಕಳೆದ ವರ್ಷ ಕೂಡ ಕೊರೋನಾ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
ಬೇಗ ಗುಣಮುಖರಾಗಲಿ:
ಕೊರೊನಾ ಸೋಂಕು ಪೀಡಿತರಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ಕರೋನಾದಿಂದ ಚೇತರಿಸಿಕೊಂಡು ಎಂದಿನಂತೆ ಆಡಳಿತದಲ್ಲಿ ಸಕ್ರಿಯರಾಗುವಂತೆ ಭಗವಂತನಲ್ಲಿ ಕೋರುತ್ತೇನೆ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊರೋನಾ ಸೋಂಕಿನಿಂದ ಅತಿ ಶೀಘ್ರವಾಗಿ ಗುಣಮುಖರಾಗಲಿ ಎಂದು ಆಶಿಸುತ್ತೇನೆ. ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಶ್ರೀ ಗುರು ದತ್ತಾತ್ರೇಯರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿ ಟಿ ರವಿ ಹೇಳಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೋನಾ ಸೊಂಕು ತಗುಲಿರುವುದು ದುರದೃಷ್ಟಕರ ಸಂಗತಿ. ಹೆಚ್ಚಿನ ಚಿಕಿತ್ಸೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದೆ. ಬೇಗ ಗುಣಮುಖರಾಗಿ ಬಂದು ಎಂದಿನಂತೆ ತಮ್ಮ ಕಾರ್ಯ ನಿರ್ವಹಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post