ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶಕ್ಕೆ SSLC Result ಕ್ಷಣಗಣನೆ ಆರಂಭವಾಗಿದ್ದು, ಮೇ 19ರಂದು ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Minister B C Nagesh ತಿಳಿಸಿದ್ದಾರೆ.
ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ.
ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯ.https://t.co/qP2v5VxzQI
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.
ಎಲ್ಲ ವಿದ್ಯಾರ್ಥಿಗಳಿಗೆ ಶುಭವಾಗಲಿ.#sslcresults— B.C Nagesh (@BCNagesh_bjp) May 18, 2022
ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇದಕ್ಕೆ ಸಂಪೂರ್ಣ ತಯಾರಿ ಮಾಡಿಕೊಂಡಿದೆ. ಸದ್ಯಕ್ಕೆ ಮೌಲ್ಯ ಮಾಪನ ಪ್ರಕ್ರಿಯೆ ಮುಗಿದಿದ್ದು, ಅಂಕಗಳ ದಾಖಲೀಕರಣ ನಡೆಯುತ್ತಿದೆ. ಫಲಿತಾಂಶವನ್ನು ವಿದ್ಯಾರ್ಥಿಗಳು 1 ಗಂಟೆಯ ಬಳಿಕ http://kseeb.kar.nic.in/ ಗೆ ಅಥವಾ karresults.nic.in ಗೆ ಭೇಟಿ ನೀಡಿ ತಮ್ಮ ಫಲಿತಾಂಶ ಚೆಕ್ ಮಾಡಬಹುದು. ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ಮಾತ್ರವಲ್ಲದೇ ತಮ್ಮ ಶಾಲೆಗಳಲ್ಲಿಯೂ, ಎಸ್‌ಎಂಎಸ್ ಮೂಲಕವು ಫಲಿತಾಂಶ ಪಡೆಯಬಹುದು.
Also read: ಮೇ 22ರಂದು ನಾರಾಯಣ ಸ್ಮರಣೆ ಕಾರ್ಯಕ್ರಮ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post