ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹೊಸ ಪಕ್ಷ ಘೋಷಿಸುವ ಮೂಲಕ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಗಾಲಿ ಜನಾರ್ಧನ ರೆಡ್ಡಿಗೆ Janardhana reddy ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಆಸ್ತಿ ಜಪ್ತಿ ಮಾಡಲು ಅನುಮತಿ ನೀಡಿದೆ.
ಜನಾರ್ದನ ರೆಡ್ಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡದ ರಾಜ್ಯ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ಕಳೆದ ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಇದರಿಂದ ಎಚ್ಚೆತ್ತುಕೊಂಡ ಗೃಹ ಇಲಾಖೆ, ಸಿಬಿಐಗೆ ಅನುಮತಿ ನೀಡಿ ಆದೇಶ ನೀಡಿದೆ.
ಈ ಕುರಿತು ಇಂದು ಹೈಕೋರ್ಟ್ ಗೆ ಮಾಹಿತಿ ನೀಡಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಅವರು, ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಈಗಾಗಲೇ ಆದೇಶ ನೀಡಿದೆ. ಗೃಹ ಇಲಾಖೆಯಿಂದ ಸಿಬಿಐಗೆ ಅನುಮತಿ ನೀಡಿ ಆದೇಶಿಸಲಾಗಿದೆ ಎಂದು ತಿಳಿಸಿದರು.
ಬಳಿಕ ಹೈಕೋರ್ಟ್, ತಕ್ಷಣವೇ ಸಿಬಿಐ ತನ್ನ ಪ್ರಕ್ರಿಯೆ ಮುಂದುವರಿಸಬೇಕು. ರೆಡ್ಡಿ ಅವರ ಆಪ್ತಿ ಜಪ್ತಿಗೆ ಕ್ರಮ ತೆಗೆದುಕೊಳ್ಳಿ ಎಂದು ಸಿಬಿಐಗೆ ಆದೇಶಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















