ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೇರಳದಲ್ಲಿ ದಿನದಿಂದ ದಿನಕ್ಕೆ ಕೋವಿಡ್ Covid ಆರ್ಭಟ ಮೆರೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಎಸ್’ಆರ್’ಟಿಸಿ KSRTC ಬಸ್’ಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಈ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಾತನಾಡಿದ್ದು, ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಸ್’ಗಳಲ್ಲಿ ಸಂಚರಿಸುವಾಗ ಮಾಸ್ಕ್ Mask ಧರಿಸುವುದು ಕಡ್ಡಾಯ ಮಾಡಲಾಗಿದೆ ಎಂದರು.
ಸರ್ಕಾರದ ಆದೇಶವನ್ನು ನಾವು ಕಟ್ಟನಿಟ್ಟಾಗಿ ಪಾಲನೆ ಮಾಡುತ್ತೇವೆ. ಇಂದು ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ದಿನೇಶ್ ಗುಂಡೂರಾವ್ ಚರ್ಚೆ ನಡೆಸಿದ್ದು, ವಿವಿಧ ಸಲಹೆಗಳನ್ನು ಪಡೆದುಕೊಳ್ಳಲಾಗಿದೆ ಎಂದರು.
Also read: CAA is not about acquiring citizenship but about granting citizenship in the country: Shah
ಕೇಂದ್ರದ ಸಲಹೆಯಂತೆ ಮುಜರಾಯಿ ಇಲಾಖೆ ಹಾಗೂ ಸಾರಿಗೆ ನಿಗಮಗಳಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಎಸ್’ಆರ್’ಟಿಸಿ ಮತ್ತು ಬಿಎಂಟಿಸಿಯಲ್ಲಿ ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರೂ ಮಾಸ್ಕ್ ಧರಿಸಿ ಪ್ರಯಾಣಿಸಿ ಎಂದು ಮನವಿ ಮಾಡಿದರು.
ಇನ್ನು, ಕೇರಳದಿಂದ ಬರುವ ಹಾಗೂ ಹೋಗುವ ಬಸ್’ಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವರು ಸೂಚನೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post