No Result
View All Result
Le Méridien Dehradun in the Foothills of the Himalayas, Inviting Guests to Slow Down and Savour the Good Life
English Articles

Le Méridien Dehradun in the Foothills of the Himalayas, Inviting Guests to Slow Down and Savour the Good Life

by ಕಲ್ಪ ನ್ಯೂಸ್
February 25, 2026
0

Kalpa Media House  |  Bengaluru  | Le Méridien Hotels & Resorts, part of Marriott Bonvoy’s global portfolio of over 30...

Read moreDetails
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
  • Advertise With Us
  • Grievances
  • About Us
  • Contact Us
Wednesday, February 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೋವಿಡ್ ಏರಿಕೆ | ಸಿಎಂ ಮಹತ್ವದ ಸಭೆ | ರಾಜ್ಯದಲ್ಲಿ ಎಷ್ಟು ಕೇಸ್ ಪತ್ತೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 21, 2023
in ಬೆಂಗಳೂರು ನಗರ
0
ಕೋವಿಡ್ ಏರಿಕೆ | ಸಿಎಂ ಮಹತ್ವದ ಸಭೆ | ರಾಜ್ಯದಲ್ಲಿ ಎಷ್ಟು ಕೇಸ್ ಪತ್ತೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದಲ್ಲಿ ಕೋವಿಡ್ 19 Covid-19 ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೋವಿಡ್ 19 ಪರಿಸ್ಥಿತಿಯ ಕುರಿತಾಗಿ ಇಂದು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.
ಸಭೆಯಲ್ಲಿ ಚರ್ಚಿಸಿದ ಅವರು, ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಾಗೂ ಬೆಂಗಳೂರಿನಲ್ಲಿ ಕೋವಿಡ್’ನಿಂದಾಗಿ ಕಳೆದ ಮೂರು ದಿನಗಳಲ್ಲಿ ಮೂವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಸ್ಥಿತಿಗತಿಯ ಕುರಿತು ಚರ್ಚಿಸಲು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸೂಚನೆ ನೀಡಿದರು.

ಕೋವಿಡ್ 19 ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಅದರಲ್ಲೂ ಜೆಎನ್ 1 ಎಂಬ ಹೊಸ ತಳಿಯ ವೈರಸ್ ಪತ್ತೆಯಾಗಿದೆ. ಕಳೆದ ಒಂದು ವಾರದ ಅವಧಿಯಲ್ಲಿ ಜಾಗತಿಕವಾಗಿ 51,214 ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ ಪ್ರತಿದಿನ ಸರಾಸರಿ 310 ಪ್ರಕರಣಗಳು ವರದಿಯಾಗುತ್ತಿವೆ ಎಂದರು.
ಕರ್ನಾಟಕದಲ್ಲಿ ಪ್ರಸ್ತುತ 92 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಕೇರಳದಲ್ಲಿ 2041, ತಮಿಳುನಾಡಿನಲ್ಲಿ 77, ಮಹಾರಾಷ್ಟçದಲ್ಲಿ 35, ಗೋವಾದಲ್ಲಿ 23 ಹಾಗೂ ಗುಜರಾತಿನಲ್ಲಿ 12 ಸಕ್ರಿಯ ಪ್ರಕರಣಗಳಿವೆ ಎಂದರು.

ರಾಜ್ಯದಲ್ಲಿರುವ ಒಟ್ಟು 92 ಸಕ್ರಿಯ ಪ್ರಕರಣಗಳಲ್ಲಿ 80 ಬೆಂಗಳೂರು ನಗರದಲ್ಲಿದ್ದು, ಉಳಿದಂತೆ ಮೈಸೂರಿನಲ್ಲಿ 5, ಬಳ್ಳಾರಿಯಲ್ಲಿ 3, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಇವರಲ್ಲಿ 72 ಜನ ಮನೆಯಲ್ಲಿಯೇ ಪ್ರತ್ಯೇಕವಾಗಿ ಹೋಂ ಐಸೋಲೇಶನ್ ಆಗಿದ್ದಾರೆ. 20 ಜನ ಆಸ್ಪತ್ರೆಗೆ ದಾಖಲಾಗಿದ್ದು, ಏಳು ಜನರು ಐಸಿಯುನಲ್ಲಿದ್ದಾರೆ ಎಂದರು.

ರಾಜ್ಯದಲ್ಲಿ ಕೋವಿಡ್ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ 5000 ಕ್ಕೆ ಹೆಚ್ಚಿಸಲಾಗಿದೆ. ಇದರಲ್ಲಿ 1500 ರ‍್ಯಾಪಿಡ್ ಟೆಸ್ಟ್ ಹಾಗೂ 3500 ಆರ್’ಟಿಪಿಸಿಆರ್ ಪರೀಕ್ಷೆಗಳಾಗಿವೆ. ಬೆಂಗಳೂರು ನಗರದಲ್ಲಿ 1000 ಪರೀಕ್ಷೆಗಳನ್ನು ನಡೆಸಲಾಗುವುದು. ಗಡಿ ಭಾಗಗಳಲ್ಲಿ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

ಕರ್ನಾಟಕದಲ್ಲಿ ಡಿ.15 ರಂದು ಒಂದು ಹಾಗೂ ಡಿ.20 ರಂದು ಎರಡು ಸಾವುಗಳು ಸಂಭವಿಸಿವೆ. ಈ ಮೂರು ಪ್ರಕರಣಗಳಲ್ಲಿ ಎಲ್ಲರೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಆದಾಗ್ಯೂ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕಾಗಿದೆ. ಕೋವಿಡ್ 19 ಈಗ ಪ್ಯಾಂಡಮಿಕ್ ಆಗಿ ಉಳಿದಿಲ್ಲ. ಎಪಿಡಮಿಕ್ ಆಗಿದೆ ಎಂದರು.

ಎಲ್ಲರೂ ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ಕೋವಿಡ್ ನ ಸಮರ್ಪಕ ನಿರ್ವಹಣೆ ಹಾಗೂ ಪಾರದರ್ಶಕತೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು. ಸರ್ಕಾರವೂ ಸಹ ಎಲ್ಲ ಅಗತ್ಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.
ಭಾರತ ಸರ್ಕಾರವೂ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಜ್ಯವೂ ಕೇರಳ ಮತ್ತು ತಮಿಳು ನಾಡು ಗಡಿ ಭಾಗದಲ್ಲಿ ಜ್ವರದ ಪ್ರಕರಣಗಳ ಮೇಲೆ ನಿಗಾ ವಹಿಸಿ, ಪರೀಕ್ಷೆ ಮತ್ತು ವರದಿ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಎಲ್ಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಸಿರಾಟದ ತೊಂದರೆ ಮತ್ತು 20 ರಲ್ಲಿ 1 ಜ್ವರದ ಪ್ರಕರಣಗಳಲ್ಲಿ ಪರೀಕ್ಷೆ ಕಡ್ಡಾಯವಾಗಿ ಮಾಡಲು ಸೂಚಿಸಿದೆ ಎಂದರು.

Also read: ಪತಿಯನ್ನೇ ಇರಿದುಕೊಂದ ಪತ್ನಿ | ಈ ಘೋರ ಕೃತ್ಯಕ್ಕೆ ಕಾರಣವೇನು?

ಸಭೆಯಲ್ಲಿ ಚರ್ಚಿತ ವಿಷಯಗಳು:

  • ಹಿಂದಿನ ಕೋವಿಡ್ ಅಲೆಗಳ ಸಂದರ್ಭದಲ್ಲಿ ನಡೆದ ತಪ್ಪುಗಳು ಈ ಬಾರಿ ಆಗಬಾರದು.
  • ಆಕ್ಸಿಜನ್, ವೆಂಟಿಲೇಟರ್, ಬೆಡ್’ಗಳು ಯಾವುದಕ್ಕೂ ತೊಂದರೆ ಆಗಬಾರದು.
  • ಕಳೆದ ಬಾರಿ ತೊಂದರೆ ಆಗಿ ಹಲವಾರು ಜನ ಮೃತಪಟ್ಟರು. ಆಕ್ಸಿಜನ್ ಲಭ್ಯತೆಯನ್ನು ಖಾತರಿ ಪಡಿಸಬೇಕು.
  • ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿP್ಷÀಣ ಇಲಾಖೆಗಳು ಸನ್ನದ್ಧವಾಗಿ ಇವು ಯಾವುದೂ ಕೊರತೆಯಾಗದಂತೆ ನೋಡಿಕೊಳ್ಳಬೇಕು.
  • ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪಾಲಿಸಬೇಕು.
  • ಎಲ್ಲ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ಮಾಡಲಾಗಿದ್ದು, ಎಲ್ಲ ಆಸ್ಪತ್ರೆಗಳೂ ಕೋವಿಡ್ ಪ್ರಕರಣಗಳನ್ನು ನಿರ್ವಹಿಸಲು ಸಿದ್ಧತೆ ನಡೆಸಿಕೊಳ್ಳಬೇಕು.

ತಾಂತ್ರಿಕ ಸಲಹಾ ಸಮಿತಿಯ ಶಿಫಾರಸು, ಮಾರ್ಗಸೂಚಿಗಳು

  • 60 ವರ್ಷ ಮೇಲ್ಪಟ್ಟ ಎಲ್ಲರೂ, ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿ ಹಾಗೂ ಬಾಣಂತಿಯರು
  • ಮಾಸ್ಕ್ ಧರಿಸುವುದು ಹಾಗೂ ಮುಚ್ಚಿದ, ಹೆಚ್ಚು ಗಾಳಿಯಾಡದ ಸ್ಥಳಗಳಿಗೆ ಹಾಗೂ ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡಬಾರದು.
  • ಉಸಿರಾಟದ ಸಮಸ್ಯೆಯ ಲP್ಷÀಣಗಳಾದ ಜ್ವರ, ಕೆಮ್ಮು, ಶೀತ, ನೆಗಡಿ ಇತ್ಯಾದಿಗಳಿಂದ ಬಳಲುತ್ತಿರುವವರು ಕೂಡಲೇ ವೈದ್ಯಕೀಯ ಸಮಾಲೋಚನೆ ನಡೆಸುವುದು ಹಾಗೂ ಮಾಸ್ಕ್ ಧರಿಸಬೇಕು.
  • ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡುವುದು. ಅನಾರೋಗ್ಯ ಪೀಡಿತರಾದರೆ ಮನೆಯ¯್ಲೆÃ ಇರಿ ಹಾಗೂ ಇತರರೊಂದಿಗೆ ಸಂಪರ್ಕವನ್ನು ಕಡಿಮೆ ಮಾಡಿ.
  • ಜನಸಂದಣಿಯ ಪ್ರದೇಶದಲ್ಲಿ ಮಾಸ್ಕ್ ಧರಿಸುವುದು ಉತ್ತಮ.
  • ವಿದೇಶ ಪ್ರವಾಸದ ಸಂದರ್ಭದಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreCM SiddaramaiahCOVID 19Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಕೋವಿಡ್-19ಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share197Tweet123Send
Previous Post

ಪತಿಯನ್ನೇ ಇರಿದುಕೊಂದ ಪತ್ನಿ | ಈ ಘೋರ ಕೃತ್ಯಕ್ಕೆ ಕಾರಣವೇನು?

Next Post

ರಾಜಕೀಯ ಸ್ವಾರ್ಥಕ್ಕೆ ಕಾಂಗ್ರೆಸ್ ತಡೆದಿದ್ದ ಯುಸಿಸಿ ಜಾರಿ ನಿಶ್ಚಿತ: ಅಮಿತ್ ಶಾ ಪುನರುಚ್ಚಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜಕೀಯ ಸ್ವಾರ್ಥಕ್ಕೆ ಕಾಂಗ್ರೆಸ್ ತಡೆದಿದ್ದ ಯುಸಿಸಿ ಜಾರಿ ನಿಶ್ಚಿತ: ಅಮಿತ್ ಶಾ ಪುನರುಚ್ಚಾರ

ರಾಜಕೀಯ ಸ್ವಾರ್ಥಕ್ಕೆ ಕಾಂಗ್ರೆಸ್ ತಡೆದಿದ್ದ ಯುಸಿಸಿ ಜಾರಿ ನಿಶ್ಚಿತ: ಅಮಿತ್ ಶಾ ಪುನರುಚ್ಚಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

February 25, 2026
ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

February 25, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

February 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಹೋಳಿ ಹಬ್ಬ | ಹುಬ್ಬಳ್ಳಿ – ಮುಜಫರ್‌ಪುರ ನಡುವೆ ವಿಶೇಷ ರೈಲುಗಳ ಸಂಚಾರ

February 25, 2026
Minister Somanna Inspects Road Over Bridges at Tiptur

Minister Somanna Inspects Road Over Bridges at Tiptur

February 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL