No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು ಸುತ್ತಮುತ್ತಲಿನ ಸಂಚಾರ ದಟ್ಟಣೆ ನಿರ್ವಹಣೆಗೆ ಪ್ರಾಧಿಕಾರ ರಚನೆ: ಸಿಎಂ

kalpa News by kalpa News
September 9, 2022
in ಬೆಂಗಳೂರು ನಗರ
0
ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬೆಂಗಳೂರು ನಗರದ ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲು ತೀರ್ಮಾನಿಸಲಾಗಿದ್ದು, ಮುಂದಿನ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿ, ಕಾಯ್ದೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಕೇಂದ್ರದ ಭೂ ಸಂಪರ್ಕ ಮತ್ತು ಹೆದ್ದಾರಿಗಳ ಸಚಿರ ನಿತಿನ್ ಗಡ್ಕರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಬೆಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಬಿಬಿಎಂಪಿ, ಬಿಡಿಎ, ಬಿಎಂಆರ್ ಡಿಎ, ಲೋಕೋಪಯೋಗಿ ಇಲಾಖೆ ಗಳಿಂದ ಹಲವು ಕಾಮಗಾರಿಗಳು ನಡೆಯುತ್ತಿರುತ್ತವೆ. ಈ ಬಗ್ಗೆ ಸಮಗ್ರ ಮಾಸ್ಟರ್ ಪ್ಲಾನ್ ರೂಪಿಸಿದರೆ ಬಹಳಷ್ಟು ಸಮಸ್ಯೆಗಳು ನಿವಾರಣೆಯಾಗುತ್ತವೆ. ಈ ಎಲ್ಲ ಸಂಸ್ಥೆಗಳ ಜೊತೆಗೆ ರೈಲ್ವೆ , ಮಟ್ರೋ ವನ್ನು ಒಳಗೊಂಡಂತೆ ಬೆಂಗಳೂರು ಮತ್ತು ಬೆಂಗಳೂರು ಸುತ್ತಮುತ್ತಲಿನ ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನೇತೃತ್ವದಲ್ಲಿ ಇಡೀ ರಾಷ್ಟ್ರದ ರಸ್ತೆ ಸಾರಿಗೆ ವ್ಯವಸ್ಥೆ ಬಗ್ಗೆ ‘ಮಂಥನ’ ಸಮಾವೇಶವನ್ನು 3 ದಿನಗಳ ಕಾಲ ನಡೆಯುತ್ತಿದೆ. ಈ ಸಂದರ್ಭದಲ್ಲಿ ಬೆಂಗಳೂರಿನ ರಸ್ತೆ ಹಾಗೂ ಸಂಚಾರದಟ್ಟಣೆಯ ಬಗ್ಗೆ ಕೇಂದ್ರ ಸಚಿವರೊಂದಿಗೆ ಸಭೆ ನಡೆಸಲಾಗಿದ್ದು, ಕೇಂದ್ರದ ಸಹಯೋಗ ಮತ್ತು ಸಹಕಾರವನ್ನು ಕೋರಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳು ಬೆಂಗಳೂರಿನ ಒಳಗೆ ಮತ್ತು ಹೊರಗೆ ಹಾದುಹೋಗುತ್ತವೆ. ಸಂಚಾರ ದಟ್ಟಣೆಯ ನಿವಾರಣೆಗೆ ರಸ್ತೆ ನಿರ್ಮಾಣಗಳು ಬಲು ಮುಖ್ಯವಾಗಿದೆ. ಹಲವು ವಿಚಾರಗಳನ್ನು ಈ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.
ಮೂರು ಮಟ್ಟದ ಸಾರಿಗೆ ತಂತ್ರಜ್ಞಾನದ ಯೋಜನೆಗೆ ತೀರ್ಮಾನ :
ಮೆಟ್ರೋ, ಫ್ಲೈ ಓವರ್ ಹಾಗೂ ರಸ್ತೆಗೆ ಬಳಕೆಯಾಗುವಂತಹ ಬಹುಪಯೋಗಿ ಪಿಲ್ಲರ್ ನಿರ್ಮಿಸುವ ತಂತ್ರಜ್ಞಾನವನ್ನು ಬಳಸಿ ಬೈಯಪ್ಪನಹಳ್ಳಿಯಲ್ಲಿ ರೈಲು ನಿರ್ಮಾಣ ಯೋಜನೆ ರೂಪಿಸಲಾಗಿದೆ. ಒಂದೇ ಪಿಲ್ಲರ್ ನ್ನು ಬಳಸಿ ಮೂರು ಅಂತಸ್ತುಗಳಲ್ಲಿ ಸಾರಿಗೆ ವ್ಯವಸ್ಥೆಯನ್ನು ನಿರ್ಮಿಸುವ ಈ ಹೊಸ ತಂತ್ರಜ್ಞಾನವನ್ನು ಬಳಸಿಕೊಂಡರೆ ಭೂ ಸ್ವಾಧೀನದ ಪ್ರಮಾಣ ಕಡಿಮೆಯಾಗುವುದು. ಈ ಬಗ್ಗೆ ಅಂತರರಾಷ್ಟ್ರೀಯ ತಜ್ಞರೊಂದಿಗೆ ಚರ್ಚಿಸಿ ಯೋಜನೆ ರೂಪಿಸಲು ತೀರ್ಮಾನಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಗಳು ಸಾಗುವಲ್ಲಿ ಇರುವ ಅಂತರ ಹಾಗೂ ರಾಷ್ಟ್ರೀಯ ಹೆದ್ದಾರಿಯಿಂದ ಹೆದ್ದಾರಿಗಳ ಸಂಪರ್ಕಕ್ಕೆ ಇರುವ ಖಾಲಿ ಸ್ಥಳವನ್ನು ತುಂಬಿಕೊಡುವುದಾಗಿ ತಿಳಿಸಿದರು. ಎಸ್.ಟಿ.ಆರ್ ಆರ್ ನ್ನು ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ. ವರ್ತುಲ ರಸ್ತೆಯ ಮಧ್ಯದಲ್ಲಿ ಸಣ್ಣ ರಿಂಗ್ ರಸ್ತೆಯನ್ನು ಮಾಡುವ ಚಿಂತನೆಯನ್ನು ಮಾಡಿದ್ದೇವೆ. ವಿನೂತವಾಗಿ ಹೊಸ ತಂತ್ರಜ್ಞಾನವನ್ನು ಉಪಯೋಗ ಮಾಡಿಕೊಂಡು ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ಅತ್ಯಂತ ಮಹತ್ವದ ತೀರ್ಮಾನಗಳನ್ನು ಮಾಡಲಾಗಿದೆ.

ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು, ಪೂನಾ ಬೆಂಗಳೂರು- ಹೆದ್ದಾರಿಯ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಕೂಡಲೇ ಸರಿಪಡಿಸಲು ಸಭೆಯಲ್ಲಿದ್ದ ರಾಷ್ಟ್ರೀಯ ಹೆದ್ದಾರಿ ಸಚಿವಾಲಯ ಕಾರ್ಯದರ್ಶಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.
ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ಒಳಚರಂಡಿ ವ್ಯವಸ್ಥೆಗೆ ಹೊಸ ಯೋಜನೆ
ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ಕಾಮಗಾರಿ ಇನ್ನಷ್ಟು ವೇಗವಾಗಿ ಪೂರ್ಣಗೊಳ್ಳಬೇಕು. ಅಲ್ಲಿನ ಮಳೆನೀರು ಚರಂಡಿ ವ್ಯವಸ್ಥೆಗಳ ತೊಡಕುಗಳ ಬಗ್ಗೆ ಹೊಸದಾಗಿ ಗೊತ್ತಾಗಿದೆ. ಎಲ್ಲೆಲ್ಲಿ ನೀರು ನಿಂತಿದೆ ಹಾಗೂ ಎಲ್ಲೆಲ್ಲಿ ನೀರು ನಿಲ್ಲಬಹುದೆಂದು ತಿಳಿದುಕೊಂಡು ಒಳಚರಂಡಿ ವ್ಯವಸ್ಥೆ ನಿರ್ಮಾಣಕ್ಕೆ ಹೊಸ ಯೋಜನೆ ತಯಾರಿಸಲು ಸಚಿವರು ಸೂಚಿಸಿದ್ದು, ಅದನ್ನು ಅನುಷ್ಠಾನ ಮಾಡುವುದಾಗಿ ತಿಳಿಸಿದ್ದಾರೆ. ಇದು ತಾಂತ್ರಿಕ ಯೋಜನೆಯಾಗಿದ್ದು, ಮುಂದಿನ ದಿನಗಳಲ್ಲಿ ಮಾಡುವುದಾಗಿ ತಿಳಿಸಿದ್ದಾರೆ ಎಂದರು.

Also read: ಕನ್ನಡಿಗರಿಗೆ 8 ಲಕ್ಷ ಉದ್ಯೋಗಗಳು ಕೈತಪ್ಪುತ್ತಿವೆ: ಡಾ. ನಾಗಭರಣ

ರಾಷ್ಟ್ರೀಯ ಹೆದ್ದಾರಿಗಳ ಬಗ್ಗೆ ಪ್ರೋತ್ಸಾಹದಾಯಕ ಚರ್ಚೆ
ಎಸ್.ಟಿ.ಆರ್ಆರ್ ಪೂನಾ – ಬೆಂಗಳೂರು ಹೆದ್ದಾರಿಯಿಂದ ಚನ್ನೈ ರಾಷ್ಟ್ರೀಯ ಹೆದ್ದಾರಿ ಬಳಿ ತಮಿಳು ನಾಡು ಮೂಲಕ ಹಾದುಹೋಗಿ ವಾಪಸ್ಸು ಬರುತ್ತದೆ. ಈ ಮಧ್ಯೆ 40-50ಕಿಮೀ ನೇರವಾಗಿ ಸಂಪರ್ಕ ಮಾಡಲು ಸಾಧ್ಯವಿದೆ. ಹೊಸದಾಗಿ ಈ ಅಂಶವನ್ನೂ ಅಳವಡಿಸಿಕೊಳ್ಳಬೇಕೆಂಬ ವಿಚಾರವನ್ನು ತಿಳಿಸಲಾಗಿದೆ. ಅದನ್ನು ಪರಿಶೀಲಿಸುವುದಾಗಿ ಕೇಂದ್ರ ಸಚಿವರು ತಿಳಿಸಿದ್ದಾರೆ.

ಕೇಂದ್ರ ರಸ್ತೆ ನಿಧಿಯಡಿ ನಿಯಮಿತ ಕಾಮಗಾರಿಗಳು, ಅದಕ್ಕೆ ಅಗತ್ಯವಿರುವ ಅನುದಾನ, ಹೆಚ್ಚಿನ ಹೆದ್ದಾರಿಗಳನ್ನು ಘೋಷಿಸುವುದರ ಬಗ್ಗೆ ಈಗಾಗಲೇ ಪತ್ರವನ್ನು ಕಳುಹಿಸಲಾಗಿತ್ತು. ಸಚಿವರು ಈ ಬಗ್ಗೆ ಸಕಾರಾತ್ಮಕವಾಗಿದ್ದಾರೆ. ನಾಳೆ ಬೆಳಿಗ್ಗೆ ಮತ್ತೊಮ್ಮೆ ಈ ಬಗ್ಗೆ ಸಭೆ ನಡೆಸಿ ಕೂಡಲೇ ಏನು ಮಾಡಲು ಸಾಧ್ಯ, ಎಲ್ಲಾ ಏಜೆನ್ಸಿಗಳು, ಸರ್ಕಾರದ ಪ್ರಾಧಿಕಾರಗಳು ಹೇಗೆ ಕೆಲಸ ಮಾಡಲು ಸಾಧ್ಯ. ಕೇಂದ್ರ ಸರ್ಕಾರದಿಂದ ಏನು ಮಾಡಲು ಸಾಧ್ಯ ಎನ್ನುವ ಬಗ್ಗೆ ನಾಳೆ ಬೆಳಿಗ್ಗೆ ಸ್ಥೂಲವಾಗಿ ಚರ್ಚಿಸಲಾಗುವುದು ಎಂದು ನಿತಿನ್ ಗಡ್ಕರಿ ಅವರು ಭರವಸೆ ನೀಡಿದ್ದಾರೆ. ಚರ್ಚೆ ಬಹಳಷ್ಟು ಪ್ರೋತ್ಸಾಹದಾಯಕವಾಗಿದೆ. ಬಹಳಷ್ಟು ಸಮಸ್ಯೆಗಳಿಗೆ ಪರಿಹಾರ ರೂಪದಲ್ಲಿ ಚರ್ಚೆ ಮಾಡಲಾಗಿದೆ ಎಂದರು.
ಹುಬ್ಬಳ್ಳಿ-ಧಾರವಾಡ ಬೈಪಾಸ್
ಕಳೆದ ಬಾರಿ ಹುಬ್ಬಳ್ಳಿ ಧಾರವಾಡದ ಬೈಪಾಸ್ ಖಾಸಗಿಯವರಿಗೆ ಹಸ್ತಾಂತರವಾಗಿ ಟೆಂಡರ್ ಆಗಿದೆ. ಬಹುತೇಕವಾಗಿ 2-3 ತಿಂಗಳಲ್ಲಿ ಪ್ರಾರಂಭವಾಗುತ್ತದೆ. ಬೆಂಗಳೂರು- ಮೈಸೂರು ಹೆದ್ದಾರಿಯನ್ನು ಈಗಿರುವ ಯೋಜನೆಯಂತೆ ನಿರ್ಮಿಸಲಾಗುವುದು. ಗ್ರಾಮಸ್ಥರ ಕೋರಿಕೆಯ ಮೇಲೆ ಪ್ರವೇಶ ಮತ್ತು ನಿರ್ಗಮನ ಪಾಯಿಂಟ್ಗಳನ್ನು ಪ್ರಾಧಿಕಾರದವರು ಮಾಡಿಕೊಡಲಿದ್ದಾರೆ ಎಂದರು.

ಮುಖ್ಯವಾಗಿ ರಾಜ್ಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳು, ಶಿರಾಡಿ ಘಾಟ್ ನಿಂದ ಹಿಡಿದು ಪ್ರಮುಖ ಹೆದ್ದಾರಿಗಳ ಬಗ್ಗೆ ಚರ್ಚೆ ಆಗಿದೆ. ಬೆಂಗಳೂರಿನ ಬಗ್ಗೆ ಪ್ರತ್ಯೇಕವಾಗಿ ಚರ್ಚೆಯಾಗಲಿದೆ. ಇಂದು ಮುಖ್ಯವಾಗಿ ಬೆಂಗಳೂರಿನ ಸಂಚಾರ ದಟ್ಟಣೆಯ ಸುಧಾರಣೆಯ ಬಗ್ಗೆ ಚರ್ಚೆಯಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡಿಗರಿಗೆ 8 ಲಕ್ಷ ಉದ್ಯೋಗಗಳು ಕೈತಪ್ಪುತ್ತಿವೆ: ಡಾ. ನಾಗಭರಣ

Next Post

ಭದ್ರಾವತಿ: ಖ್ಯಾತ ನಿವೃತ್ತ ಶಿಕ್ಷಕಿ ಶ್ಯಾಮಲಾ ನಿಧನ

kalpa News

kalpa News

Next Post
ಭದ್ರಾವತಿ: ಖ್ಯಾತ ನಿವೃತ್ತ ಶಿಕ್ಷಕಿ ಶ್ಯಾಮಲಾ ನಿಧನ

ಭದ್ರಾವತಿ: ಖ್ಯಾತ ನಿವೃತ್ತ ಶಿಕ್ಷಕಿ ಶ್ಯಾಮಲಾ ನಿಧನ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL