ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಂಧನ ದಕ್ಷತೆ ಮತ್ತು ಸಂರಕ್ಷಣೆಗೆ ರಾಜ್ಯ ನಿಯೋಜಿತ ಸಂಸ್ಥೆ ಆಗಿರುವ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ಇದೇ ಡಿಸೆಂಬರ್ 14 ರಿಂದ 20ರವರೆಗೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹವನ್ನು #National Energy Conservation Week ಆಚರಿಸಲಿದೆ.
ಪ್ರತಿ ವರ್ಷ ಡಿಸೆಂಬರ್ 14 ರಂದು ದೇಶಾದ್ಯಂತ ಆಚರಿಸುವ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನ’ ಸಂದರ್ಭದಲ್ಲಿ ಇಂಧನ ದಕ್ಷತೆ ಮತ್ತು ಸುಸ್ಥಿರತೆಯನ್ನು ಉತ್ತೇಜಿಸುವ ರಾಜ್ಯದ ಬದ್ಧತೆಯನ್ನು ಒತ್ತಿ ಹೇಳಲು ಈ ಸಪ್ತಾಹದ ಆಚರಣೆ ಮಾಡಲಾಗುತ್ತಿದೆ.
ಕೇಂದ್ರದ ಇಂಧನ ಸಚಿವಾಲಯದ ಅಡಿ ಕಾರ್ಯ ನಿರ್ವಹಿಸುವ ‘ಇಂಧನ ದಕ್ಷತೆಯ ಬ್ಯೂರೋ’ (ಬಿಇಇ), #BEE ಇಂಧನ ಸಂರಕ್ಷಣೆ ಮತ್ತು ಸುಸ್ಥಿರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮಹತ್ವವನ್ನು ಸಾರುವ ಉದ್ದೇಶದಿಂದ ಎಲ್ಲ ರಾಜ್ಯಗಳಲ್ಲಿ ಇಂಧನ ಇಲಾಖೆ ವತಿಯಿಂದ ಸಪ್ತಾಹದ ಆಚರಣೆಯನ್ನು ಕಡ್ಡಾಯಗೊಳಿಸಿದೆ. ಪರಿಸರ ಹಾನಿ ಮತ್ತು ಹವಾಮಾನ ಬದಲಾವಣೆಯ ತುರ್ತು ಸವಾಲುಗಳನ್ನು ಎದುರಿಸುವ ದೇಶದ ಪ್ರಮುಖ ಧ್ಯೇಯದ ಭಾಗ ಈ ಆಚರಣೆ.
Also read: ರಾಯಚೂರು | ಪೋಟ್ನಾಳದಲ್ಲಿ ನಿರ್ಮಾಣವಾಗಲಿದೆ ಹೊಸ ಕ್ರಾಸಿಂಗ್ ರೈಲ್ವೆ ನಿಲ್ದಾಣ
ಇಂಧನ ಸಂರಕ್ಷಣಾ ಸಪ್ತಾಹದ ಸಂದರ್ಭದಲ್ಲಿ ಇಂಧನ ಬಳಕೆಯ ಪ್ರಮಾಣ ತಗ್ಗಿಸುವುದು, ಇಂಧನದ ದಕ್ಷ ಬಳಕೆಯನ್ನು ಉತ್ತೇಜಿಸುವುದು ಮತ್ತು ರಾಜ್ಯದಲ್ಲಿ ಸುಸ್ಥಿರ ಅಭ್ಯಾಸಗಳನ್ನು ಬೆಳೆಸುವ ಬಗ್ಗೆ ಕ್ರೆಡಲ್ ಜಾಗೃತಿ ಮೂಡಿಸಲಿದೆ.
ಇಂಧನ ಸಂರಕ್ಷಣಾ ಸಪ್ತಾಹದ ಕುರಿತು ಮಾತನಾಡಿರುವ ಇಂಧನ ಸಚಿವ ಕೆ.ಜೆ. ಜಾರ್ಜ್, #Energy Minister K J George “ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹದಲ್ಲಿ ನಮ್ಮ ಇಲಾಖೆ ವತಿಯಿಂದ ವಾಕಥಾನ್ ಮತ್ತು ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಸ್ಪರ್ಧೆಗಳು ಸೇರಿದಂತೆ ಹಲವು ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಇಂಧನ ಸಂರಕ್ಷಣೆಯ ಮಹತ್ವದ ಬಗ್ಗೆ ವ್ಯಾಪಕವಾಗಿ ಜಾಗೃತಿ ಮೂಡಿಸುವ ಪ್ರಯತ್ನದ ಮೂಲಕ ಭವಿಷ್ಯದ ಪೀಳಿಗೆಗೆ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸಲು ಪ್ರೇರೇಪಿಸಲಾಗುತ್ತದೆ” ಎಂದಿದ್ದಾರೆ.
“ಹವಾಮಾನ ಬದಲಾವಣೆ ಇಂದಿನ ಕಾಲಮಾನದ ಅತ್ಯಂತ ಗಂಭೀರ ಸವಾಲುಗಳಲ್ಲಿ ಒಂದಾಗಿದೆ. ಪರಿಸರ ವ್ಯವಸ್ಥೆ, ಆರ್ಥಿಕತೆ ಮತ್ತು ನಮ್ಮ ಜೀವನೋಪಾಯದ ಮೇಲೆ ಇದು ಪರಿಣಾಮ ಬೀರುವುದರಿಂದ ಇಂಧನ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಈ ಗುರುತರ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯೋನ್ಮುಖವಾಗಿಸಲು ಈ ಸಪ್ತಾಹವು ಉತ್ತೇಜಿಸುತ್ತದೆ,”ಎಂದು
ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹೇಳಿದ್ದಾರೆ.
ಹಸಿರುಮನೆ ಅನಿಲ ಹೊರಸೂಸುವಿಕೆ, ಅರಣ್ಯನಾಶ ಮತ್ತು ಮಾಲಿನ್ಯದಂತಹ ಸವಾಲುಗಳನ್ನು ಎದುರಿಸಲು ರಾಜ್ಯವ್ಯಾಪಿ ಆಂದೋಲನ ನಡೆಸುವ ಅಗತ್ಯವನ್ನು ಒತ್ತಿ ಹೇಳಿದ ಕ್ರೆಡಲ್ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ, ಇಂಧನ ಸಂರಕ್ಷಣಾ ಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಖಾತ್ರಿಗಾಗಿ ವಿವಿಧ ಸಂಸ್ಥೆಗಳು ಮತ್ತು ಇಲಾಖೆಗಳು ಸೂಕ್ತವಾದ ಕ್ರಿಯಾ ಯೋಜನೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಕರೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post