ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಾಸನಾಂಬೆ #Hasanambe ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಧಾವಿಸುತ್ತಿದ್ದು, ಜನಸಂಖ್ಯೆ ನಿಯಂತ್ರಿಸಲು ಬೆಂಗಳೂರು-ಹಾಸನ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಹಾಗೂ ಟಿಕೆಟ್ ಬುಕಿಂಗ್ ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ವಾರಾಂತ್ಯ ಹಾಗೂ ದೀಪಾವಳಿ ರಜೆ ಕಾರಣದಿಂದ ಹಾಸನಾಂಬೆ ದರ್ಶನಕ್ಕೆ ತೆರಳುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಕೆಎಸ್‌ಆರ್‌ಟಿಸಿ #KSRTC ಬಸ್ ಸಂಚಾರ ಸ್ಥಗಿತಕ್ಕೆ ಕಡಿವಾಣ ಹಾಕಲಾಗಿದೆ ಎಂದು ತಿಳಿದುಬಂದಿದೆ.
ಹಾಸನಾಂಬೆ ದೇಗುಲ ಹಾಗೂ ಸುತ್ತಮುತ್ತ ಬಾರಿ ಜನಸ್ತೋಮ ನೆರೆದಿದೆ. ಭಕ್ತರು ಹಾಸನಾಂಬೆ ದರ್ಶನಕ್ಕೆ ಸರತಿ ಸಾಲಿನಲ್ಲಿ ಕಾಯುತ್ತಿದ್ದಾರೆ. ಇತ್ತ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಭಕ್ತರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಭಕ್ತರನ್ನು ನಿಯಂತ್ರಸಲು ಅಸಾಧ್ಯದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ತಾತ್ಕಾಲಿಕವಾಗಿ ಬಸ್ ಸಂಚಾರ ಸ್ಥಗಿತಗೊಂಡಿದೆ.
ಇನ್ನೂ ಈಗಾಗಲೇ ಸಹಸ್ತ್ರಾರು ಭಕ್ತರು ಹಾಸನಾಂಬೆ ದರ್ಶನ ಪಡೆಯಲು 50 ಸಾವಿರ ಮುಂಗಡ ಟಿಕೆಟ್ ಕಾಯ್ದಿರಿಸಿದ್ದಾರೆ. ಹೀಗಾಗಿ, ತಾತ್ಕಾಲಿಕವಾಗಿ ಟಿಕೆಟ್ ಬುಕಿಂಗ್ ಕೂಡ ಸ್ಥಗಿತಗೊಳಿಸಲಾಗಿದೆ.
ಹಾಸನಾಂಬೆ ದರ್ಶನಕ್ಕೆ ಭಕ್ತರ ಸಾಗರ ಹೆಚ್ಚಾಗಿರುವ ಕಾರಣ ದರ್ಶನಕ್ಕೆ ಕಿಲೋಮೀಟರ್‌ಗಟ್ಟಲೇ ಸಾಲು ದೊಡ್ಡದಾಗಿದೆ. 1,000 ರೂ. ಹಾಗೂ 300 ರೂ. ಟಿಕೆಟ್ ಪಡೆದ ಭಕ್ತರು ಪ್ರತ್ಯೇಕ ಸಾಲುಗಳಲ್ಲಿ ಬಂದು ದರ್ಶನ ಪಡೆಯುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post