ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಂದಿನ ಮಕ್ಕಳಿಗೆ ಸಂಸ್ಕಾರವೇ ಮುಖ್ಯ. ಆ ಸಂಸ್ಕಾರದಿಂದಲೇ ಮಕ್ಕಳಿಗೆ ಶ್ರೇಯೋಭಿವೃದ್ಧಿ ಆಗಲಿದೆ ಎಂದು ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ಯರು ತಿಳಿಸಿದರು.
ಪರಮಪೂಜ್ಯ ಶ್ರೀ ಶ್ರೀ 1008 ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ #Shri Subudhendra Swamiji ಆದೇಶದಂತೆ ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendraswamy Mutt ಈ ಭಾನುವಾರದಂದು ನಡೆದ ಶ್ರೀಹರಿ ಭಜನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಶೇಷ ಪೂಜೆ, ಅನ್ನದಾನ ಸೇವೆ ಹಾಗೂ ಸಂಗೀತ ಸೇವೆ
ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಏಪ್ರಿಲ್ 17, ಗುರುವಾರ ಬೆಳಗ್ಗೆ ರಾಯರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ ಹಾಗೂ ಅನ್ನದಾನ ಸೇವೆ ಕಾರ್ಯಕ್ರಮಗಳು ನಡೆದವು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post