ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಲ್ಪಸಂಖ್ಯಾತರ ಮತಕ್ಕಾಗಿ ಡಿ.ಕೆ. ಶಿವಕುಮಾರ್ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಮಂಗಳೂರು ಸ್ಫೋಟ ಪ್ರಕರಣಕ್ಕೂ ಮತದಾರರ ಪಟ್ಟಿ ಪ್ರಕರಣಕ್ಕೂ ಯಾವ ಸಂಬಂಧವೂ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಹೇಳಿದ್ದಾರೆ.
ವಿಕಾಸಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಮಾಧ್ಯಮದಲ್ಲಿ ನೋಡಿ ತುಂಬಾ ನೋವಾಯಿತು. ಜವಾಬ್ದಾರಿ ಸ್ಥಾನದಲ್ಲಿ ಇರುವ ವ್ಯಕ್ತಿಗಳು ಆಡುವ ಮಾತಲ್ಲ ಇದು. ಇದನ್ನು ನಾನು ಖಂಡಿಸುತ್ತೇನೆ. ದೇಶದ ಆಂತರಿಕ ಭದ್ರತೆಯ ವಿಚಾರ ಇದು. ನಾವೆಲ್ಲಾ ರಾಜಕಾರಣವನ್ನು ಮೀರಿ ಇದರ ಬಗ್ಗೆ ಹೇಳಿಕೆ ನೀಡಬೇಕು ಎಂದು ಹೇಳಿದರು.













Discussion about this post