ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೇಶದಲ್ಲಿ ತುರ್ತು ಪರಿಸ್ಥಿತಿ #Emergency Period ನಿರ್ಮಾಣವಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಅವರು ಡಿಜಿ ಹಳ್ಳಿ-ಕೆಜಿ ಹಳ್ಳಿಯ ಗಲಭೆ ಸಂದರ್ಭದಲ್ಲಿ ತಲವಾರು ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದನ್ನು ಅಥವಾ ಕರಾವಳಿಯಲ್ಲಿ ನಡೆದ ಗಲಭೆಯನ್ನು ಉದ್ದೇಶಿಸಿ ಹಾಗೆ ಹೇಳುತ್ತಿದ್ದಾರೆನೋ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ #DS Arun ವ್ಯಂಗ್ಯವಾಡಿದರು.

ವಿಧಾನಪರಿಷತ್ ಅಧಿವೇಶನದಲ್ಲಿ #Legislative Council Assembly ಮೊದಲ ಬಾರಿಗೆ ಪರಿಷತ್ ಪ್ರವೇಶಿಸಿ ಕಾವೇರಿದ ಚರ್ಚೆಯಲ್ಲಿ ಪ್ರಧಾನ ಪಾತ್ರ ವಹಿಸಿ ಎಲ್ಲರ ಗಮನಸೆಳೆದ ಅರುಣ್, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜೈಲಿಗೆ ಹೋದ ಅನೇಕರು ಈ ಸದನದಲ್ಲಿದ್ದಾರೆ. ನಮ್ಮ ಕುಟುಂಬದ 15 ಮಂದಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜೈಲಿಗೆ ಹೋಗಿದ್ದರು. ವಂದೇ ಮಾತರಂ, ಭಾರತ್ ಮಾತಾಕೀ ಜೈ ಎಂದು ಘೋಷಣೆ ಕೂಗಿದವರನ್ನೆಲ್ಲ ಆಗ ಜೈಲಿಗೆ ಅಟ್ಟಲಾಗುತ್ತಿತ್ತು. ಈಗ ಅಂತಹ ಸ್ಥಿತಿ ಇಲ್ಲ ಎಂದು ಅವರು ಹೇಳಿದರು.

ಹಿಜಾಬ್ #Hijab ಧರಿಸುವುದಕ್ಕೆ ಅವಕಾಶ ನೀಡಬಾರದು ಎಂದು ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಶಿವಮೊಗ್ಗ ಬಾಪೂಜಿನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಧ್ವಜಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಸಿದಂತೆ ಕಾವೇರಿದ ಚರ್ಚೆಯಲ್ಲಿ ಮಾತನಾಡಿದ ಅವರು, ಸಿಆರ್‌ಪಿಸಿ ಸೆಕ್ಷನ್ 144ನೇ ಸೆಕ್ಷನ್ #144 Section ಜಾರಿಯಿದ್ದಾಗಲೂ ಶಿವಮೊಗ್ಗ #Shivamogga ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಹಾರಿಸಿದ್ದನ್ನು ಅವರು ಪ್ರಸ್ತಾಪಿಸಿದರು.

ಈ ಬಗ್ಗೆ ವಾದ- ವಿವಾದಗಳು ನಡೆದವು. ಬಿಜೆಪಿ ಸದಸ್ಯರು ಅರುಣ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಸಭಾಪತಿ ಬಸವರಾಜ ಹೊರಟ್ಟಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















