ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ #Renukaswamy Murder Case ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ #Supreme Court ರದ್ದು ಮಾಡಿದ ಬೆನ್ನಲ್ಲೇ ನಟಿ ರಮ್ಯಾ #Actresss Ramya ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕಾನೂನಿನ ಮುಂದೆ ಎಲ್ಲರೂ ಸಮಾನರು. ಎಲ್ಲರಿಗೂ ನಾನು ಹೇಳುವುದೇನೆಂದರೆ ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ, ಕಾನೂನು ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ಎಲ್ಲರಿಗೂ ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ಬರೆದುಕೊಂಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ #Darshan ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಎಲ್ಲರಿಗೂ ನಾನು ಹೇಳುವುದೇನೆಂದರೆ ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ, ಕಾನೂನು ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ಎಲ್ಲರಿಗೂ ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ಬರೆದುಕೊಂಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ #High Court ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದ ಬೆನ್ನಲ್ಲೇ ಹಲವು ಬೆಳವಣಿಗೆಗಳು ನಡೆಯುತ್ತಿವೆ.
ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸುಪ್ರೀಂ ಕೋರ್ಟ್ ಆದೇಶದಿಂದ ಶಾಕ್ ಆಗಿದೆ ಎಂದಿದ್ದಾರೆ.
ಜಾಮೀನು ರದ್ದು ಮಾಡಿರುವ ಆದೇಶ ಶಾಕ್ ನೀಡಿದೆ. ಆದರೆ ನ್ಯಾಯಾಲಯದ ಆದೇಶ ಪಾಲನೆ ಮಾಡುವುದು ಎಲ್ಲರ ಕರ್ತವ್ಯ ಎಂದಿದ್ದಾರೆ.
ಜೈಲಿನಲ್ಲಿ ದರ್ಶನ್ ಸೇರಿದಂತೆ ಯಾವ ಅಪರಾಧಿಗಳಿಗೂ ವಿಐಪಿ ಟ್ರೀಟ್ಮೆಂಟ್ ನೀಡಬಾರದು. ನಾವು ಇದನ್ನು ಗಮನಿಸುತ್ತೇವೆ ಎಂದು ಸುಪ್ರೀಂ ಖಡಕ್ ಸೂಚನೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಈ ವಿಚಾರದಲ್ಲಿ ನಾವು ಎಚ್ಚರಿಕೆಯಿಂದ ಇರಬೇಕಾಗುತ್ತದೆ ಎಂದಷ್ಟೇ ಹೇಳಿದ್ದಾರೆ.
ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ್ದು, ದರ್ಶನ್’ಗೆ ಜೈಲಿನಲ್ಲಿ ವಿಐಪಿ ಟ್ರೀಟ್ಮೆಂಟ್ ನೀಡಿದರೆ ಹುಷಾರ್ ಎಂದು ಎಚ್ಚರಿಕೆ ನೀಡಲಾಗಿದೆ.
ಈ ಕುರಿತಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದು, ಎಲ್ಲ ಆರೋಪಿಗಳನ್ನು ತಕ್ಷಣವೇ ವಾಸಕ್ಕೆ ಪಡೆಯಲು ಸೂಚಿಸಿದೆ. ಅಲ್ಲದೇ, ದರ್ಶನ್’ಗೆ ಜೈಲಿನಲ್ಲಿ ವಿಐಪಿ ಟ್ರೀಟ್ಮೆಂಟ್ ಕೊಟ್ಟರೆ ಹುಷಾರ್ ಎಂದು ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ ಕೊಟ್ಟಿದೆ.
ಏನು ಹೇಳಿದೆ ಸುಪ್ರೀಂ ಕೋರ್ಟ್?
ಜೈಲಿನಲ್ಲಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ವಿಐಪಿ ಟ್ರೀಟ್ಮೆಂಟ್ ನೀಡುವಂತಿಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ಮೆಂಟ್ ನೀಡಲಾಗುತ್ತಿದೆ ಎಂದು ನಮಗೆ ತಿಳಿದ ದಿನ, ಮೊದಲ ಹೆಜ್ಜೆಯೇ ಸೂಪರಿಂಟೆAಡೆAಟ್ ಮತ್ತು ಇತರ ಎಲ್ಲ ಅಧಿಕಾರಿಗಳನ್ನು ಅಮಾನತುಗೊಳಿಸುತ್ತೇವೆ.
ರಾಜ್ಯ ಸರ್ಕಾರ ಯಾರಿಗಾದರೂ ವಿಐಪಿ ಟ್ರೀಟ್ಮೆಂಟ್ ನೀಡುತ್ತಿರುವ ಛಾಯಾಚಿತ್ರಗಳು ಅಥವಾ ಯಾವುದೇ ವೀಡಿಯೊವನ್ನು ನಾವು ನೋಡಿದರೆ ಮೊದಲು ನಿಮ್ಮನ್ನು ಸಸ್ಪೆಂಡ್ ಮಾಡಲಾಗುತ್ತದೆ ಎಂದು ಕೋರ್ಟ್ ಖಡಕ್ ವಾರ್ನಿಂಗ್ ನೀಡಿದೆ.
ಹೈಕೋರ್ಟ್ ಆದೇಶದ ಬಗ್ಗೆ ಹೇಳಿದ್ದೇನು?
ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆAಡ್’ನನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















