ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡುವ ಯಾವುದೇ ರೀತಿಯ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ವದಂತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತೆರೆ ಎಳೆದಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಎಸ್’ಪಿಪಿ ಪ್ರಸನ್ನ ಅವರನ್ನು ಬದಲಾವಣೆ ಮಾಡುವ ಪ್ರಸ್ತಾವನೆಯಿಲ್ಲ. ಊಹೋಪೋಹಗಳಿಗೆ, ವದಂತಿಗಳಿಗೆ ಕಿವಿಗೊಡಬೇಡಿ. ಈಗಿರುವವರೇ ಎಸ್’ಪಿಪಿ ಆಗಿ ಮುಂದುವರೆಯಲಿದ್ದಾರೆ. ಇದರಲ್ಲಿ ಯಾವುದೇ ರೀತಿಯಲ್ಲೂ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Also read: ದರ್ಶನ್ ಬಚಾವ್’ಗೆ ಕೆಲವು ಸಚಿವರ ಪ್ರಯತ್ನ | ಸಿಎಂ, ಗೃಹ ಸಚಿವರ ಖಡಕ್ ವಾರ್ನಿಂಗ್ ಏನು?
ಆದರೆ, ದರ್ಶನ್ #Darshan ಬಚಾವ್ ಮಾಡುವ ಕುರಿತಾಗಿ ಈ ಸಂಬಂಧಿಸಿದ ಯಾವುದೇ ವಿಚಾರಗಳೊಂದಿಗೆ ನನ್ನ ಬಳಿ ಬರಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಖಡಕ್ ವಾರ್ನಿಂಗ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಆದರೆ, ಈ ಊಹಾಪೋಹಗಳಿಗೆ ಸಿಎಂ ಸಿದ್ದರಾಮಯ್ಯ ಇಂದು ತೆರೆ ಎಳೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post