ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ #Renukaswamy murder case ಜೈಲುಪಾಲಾಗಿರುವ ನಟ ದರ್ಶನ್ #Actor Darshan ಸಲ್ಲಿಸಿದ್ದ ಮನೆ ಊಟದ ಕುರಿತ ಕೋರಿಕೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಿ ಎಂದು ಹೈಕೋರ್ಟ್ #High Court ಆದೇಶಿಸಿದೆ.
‘ಮನೆ ಊಟ, ಹಾಸಿಗೆ ಮತ್ತು ಬಟ್ಟೆ ಪಡೆಯಲು ಅನುಮತಿಸುವಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ನಿರ್ದೇಶಿಸಬೇಕು ಎಂದು ಜೈಲಿನಲ್ಲಿರುವ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಸಂಪರ್ಕಿಸುವಂತೆ ಆದೇಶಿಸಿದೆ.
Also read: ಕೇಂದ್ರ ಬಜೆಟ್’ನಲ್ಲಿ ಶಿವಮೊಗ್ಗದ ಈ ಕ್ಷೇತ್ರಕ್ಕೆ ಒತ್ತು ನೀಡುವಂತೆ ಮನವಿ | ಸಂಸದ ರಾಘವೇಂದ್ರ ಹೇಳಿದ್ದೇನು?

ಇನ್ನು ದರ್ಶನ್ ಪರ ವಕೀಲರ ವಾದಕ್ಕೆ ಆಕ್ಷೇಪಿಸಿದ ಪ್ರಾಸಿಕ್ಯೂಷನ್ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿ.ಜಿ. ಭಾನುಪ್ರಕಾಶ್ ಹಾಗೂ ಮತ್ತೊಬ್ಬ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನಕುಮಾರ್, ‘ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ 5 ಸಾವಿರ ಕೈದಿಗಳಿದ್ದಾರೆ. ಅವರೆಲ್ಲರೂ ಇದೇ ರೀತಿ ಕೇಳುತ್ತಾ ಹೋದರೆ ಏನು ಮಾಡುವುದು. ಅಷ್ಟಕ್ಕೂ ಕೈದಿಗಳಿಗೆ ಸರ್ಕಾರ ಉತ್ತಮವಾದ ಪೌಷ್ಟಿಕ ಆಹಾರವನ್ನೇ ನೀಡುತ್ತಿದೆ’ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Discussion about this post