ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ #Renukaswamy Murder Case ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್, #Darshan ಅಲ್ಲಿ ಯಾರ ಮೇಲೂ ಹಲ್ಲೆ ಮಾಡಿಲ್ಲ ಎಂದು ಅವರ ಪತ್ನಿ ವಿಜಯಲಕ್ಷ್ಮಿ #Vijayalakshmi Darshan ಸ್ಪಷ್ಟನೆ ನೀಡಿದ್ದಾರೆ.
ಜೈಲಿನಲ್ಲಿ ಸಹ ಖೈದಿಗಳ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ ಎಂಬ ಸುದ್ದಿಗಳ ವೈರಲ್ ಆದ ಹಿನ್ನೆಲೆಯಲ್ಲಿ ಅವರು ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟನೆ ನೀಡಿ, ಇವೆಲ್ಲಾ ಸುಳ್ಳು ಎಂದಿದ್ದಾರೆ.
ದರ್ಶನ್ ಜೈಲಿನಲ್ಲಿ ಯಾರ ಮೇಲೆಯೂ ಹಲ್ಲೆ ಮಾಡಿಲ್ಲ. ನಾನು ಖುದ್ದಾಗಿ ಜೈಲಿಗೆ ಭೇಟಿ ಮಾಡಿ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅವರ ಮೇಲಿನ ಆರೋಪಗಳೆಲ್ಲ ಉದ್ದೇಶಪೂರ್ವಕವಾಗಿ ಮಾಡಲಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.
ದರ್ಶನ್ ಕುರಿತ ವದಂತಿಗಳಿಂದ ನನಗೆ ನೋವುಂಟಾಗಿದೆ. ಸತ್ಯವು ಸ್ವಲ್ಪ ಸಮಯದವರೆಗೆ ಮೌನವಾಗಿರಬಹುದು. ಆದರೆ ಎಂದಿಗೂ ತಲೆಬಾಗುವುದಿಲ್ಲ. ಸುಳ್ಳುಗಳು ಜೋರಾಗಿ ಪ್ರತಿಧ್ವನಿಸುತ್ತದೆ ಎಂದಿದ್ದಾರೆ.
ದರ್ಶನ್ ಅವರು ಜೈಲಿನ ಕಠಿಣ ನಿಯಮಗಳಿಂದ ಕಂಗಾಲಾಗಿದ್ದಾರೆ ಹೋಗಿದ್ದಾರೆ. ಮಾನಸಿಕ ವೇದನೆಯಿಂದ ಸಹ ಕೈದಿಗಳ ಮೇಲೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿದ್ದಾರೆ. ಸೆಲ್’ನಲ್ಲಿ ದೊಡ್ಡ ಜಗಳ ನಡೆದಿದೆ, ದರ್ಶನ್ ಅವರ ಹಿಂಸೆ ತಾಳಲಾರದೆ ಇಬ್ಬರು ಕೈದಿಗಳು ಚಿತ್ರದುರ್ಗ ಜೈಲಿಗೆ ವರ್ಗಾಯಿಸುವಂತೆ ಕೇಳಿಕೊಂಡಿದ್ದರು ಎಂದು ಹೇಳಲಾಗಿತ್ತು. ಆದರೆ ಈ ಸುದ್ದಿಗಳೆಲ್ಲ ಸುಳ್ಳು ಎಂದಿದ್ದಾರೆ ವಿಜಯಲಕ್ಷಿö್ಮ ಸ್ಪಷ್ಟನೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















