ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಕೊಲೆ ಪ್ರಕರಣದ #Renukaswamy Murder Case ಆರೋಪಿ ನಟ ದರ್ಶನ್’ನನ್ನು #Darshan ಅವರ ಪತ್ನಿ ವಿಜಯಲಕ್ಷ್ಮಿ #Vijayalakshmi ಅವರ ನಿವಾಸದಿಂದ ಬಂಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಹಾಗೂ ದರ್ಶನ್ ಸೇರಿದಂತೆ 7 ಅರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸುತ್ತಿದ್ದಾರೆ.
ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾಟ್ಮೆಂಟನಲ್ಲಿ ಇದ್ದ ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್ ಅವರು ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ ಸುದ್ದಿ ಬಂದಿತ್ತು. ಆದರೆ ಪೊಲೀಸರು ದರ್ಶನ್ ಅಪಾರ್ಟ್ಮೆಂಟ್’ಗೆ ತೆರಳಿ ಅವರನ್ನು ತೆರಳಿ ಅವರನ್ನು ಅರೆಸ್ಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿಯಾಗಿದ್ದಾರೆ. ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ #Pavithra Gowda ಅವರನ್ನು ಈ ಮೊದಲೇ ಪೊಲೀಸರು ಅರೆಸ್ಟ್ ಮಾಡಿದ್ದರು.
ಜೈಲಲ್ಲಿ ದರ್ಶನ್’ಗೆ ಹುಷಾರ್ | ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ #Supreme Court ರದ್ದುಗೊಳಿಸಿದ್ದು, ದರ್ಶನ್’ಗೆ ಜೈಲಿನಲ್ಲಿ ವಿಐಪಿ ಟ್ರೀಟ್ಮೆಂಟ್ ನೀಡಿದರೆ ಹುಷಾರ್ ಎಂದು ಎಚ್ಚರಿಕೆ ನೀಡಲಾಗಿದೆ.
ಈ ಕುರಿತಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದು, ಎಲ್ಲ ಆರೋಪಿಗಳನ್ನು ತಕ್ಷಣವೇ ವಾಸಕ್ಕೆ ಪಡೆಯಲು ಸೂಚಿಸಿದೆ. ಅಲ್ಲದೇ, ದರ್ಶನ್’ಗೆ ಜೈಲಿನಲ್ಲಿ ವಿಐಪಿ ಟ್ರೀಟ್ಮೆಂಟ್ ಕೊಟ್ಟರೆ ಹುಷಾರ್ ಎಂದು ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ ಕೊಟ್ಟಿದೆ.
ಏನು ಹೇಳಿದೆ ಸುಪ್ರೀಂ ಕೋರ್ಟ್?
ಜೈಲಿನಲ್ಲಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ವಿಐಪಿ ಟ್ರೀಟ್ಮೆಂಟ್ ನೀಡುವಂತಿಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ಮೆಂಟ್ ನೀಡಲಾಗುತ್ತಿದೆ ಎಂದು ನಮಗೆ ತಿಳಿದ ದಿನ, ಮೊದಲ ಹೆಜ್ಜೆಯೇ ಸೂಪರಿಂಟೆಂಡೆಂಟ್ ಮತ್ತು ಇತರ ಎಲ್ಲ ಅಧಿಕಾರಿಗಳನ್ನು ಅಮಾನತುಗೊಳಿಸುತ್ತೇವೆ.
ರಾಜ್ಯ ಸರ್ಕಾರ ಯಾರಿಗಾದರೂ ವಿಐಪಿ ಟ್ರೀಟ್ಮೆಂಟ್ ನೀಡುತ್ತಿರುವ ಛಾಯಾಚಿತ್ರಗಳು ಅಥವಾ ಯಾವುದೇ ವೀಡಿಯೊವನ್ನು ನಾವು ನೋಡಿದರೆ ಮೊದಲು ನಿಮ್ಮನ್ನು ಸಸ್ಪೆಂಡ್ ಮಾಡಲಾಗುತ್ತದೆ ಎಂದು ಕೋರ್ಟ್ ಖಡಕ್ ವಾರ್ನಿಂಗ್ ನೀಡಿದೆ.
ಹೈಕೋರ್ಟ್ ಆದೇಶದ ಬಗ್ಗೆ ಹೇಳಿದ್ದೇನು?
ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆAಡ್’ನನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post